ಡಿವಿಜಿ ಸುದ್ದಿ, ಕೋಲಾರ: ವಿಧಾನ ಪರಿಷತ್ ಚುನಾವಣೆಯಲ್ಲಿ ಎಚ್. ವಿಶ್ವನಾಥ್ ಅವರಿಗೆ ಬಿಜೆಪಿಟಿಕೆಟ್ ಕೈ ತಪ್ಪಿರುವುದು ಬೇಸರ ತಂದಿದೆ. ಅವರು ತಾಳ್ಮೆಯಿಂದ ಇದ್ದರೆ ಮುಂದಿನ ದಿನಗಳಲ್ಲಿ ಅವರಿಗೆ ಉತ್ತಮ ಸ್ಥಾನ ಸಿಗಲಿದೆ ಎಂದು ಅಬಕಾರಿ ಸಚಿವ ಎಚ್. ನಾಗೇಶ್ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೆಲವು ಸಮಯ ರಾಜಕೀಯದಲ್ಲಿ ಏರುಪೇರುಗಳು ಆಗುವುದು ಸಹಜ. ಅದು ಒಬ್ಬರ ನಿರ್ಧಾರ ಅಲ್ಲ, ಮುಖ್ಯಮಂತ್ರಿಗಳಿಗೂ ವಿಶ್ವನಾಥ್ ಅವರಿಗೆ ಟಿಕೆಟ್ ಕೊಡಲು ಒಲವಿತ್ತು. ಆದರೆ, ಹೈಕಮಾಂಡ್ ಕೈ ಬಿಟ್ಟಿದೆ. ಅವರು ಒಂದು ಪಕ್ಷದ ಅಧ್ಯಕ್ಷರಾಗಿದ್ದವರು, ಅವರ ಆಗಮನ ಬಿಜೆಪಿಗೆ ಆನೆ ಬಲ ಬಂದಂತಾಗಿತ್ತು. ಆದರೆ ಸ್ವಲ್ಪ ತಾಳ್ಮೆ ವಹಿಸಬೇಕು ಎಮದು ತಿಳಿಸಿದರು.
ಎಂಟಿಬಿ ನಾಗರಾಜ್, ಆರ್.ಶಂಕರ್, ಸುನಿಲ್ ವಲ್ಯಾಪುರೆ ಮತ್ತು ಪ್ರತಾಪ್ ಸಿಂಹ ನಾಯಕ್ ಈ ನಾಲ್ವರಿಗೆ ವಿಧಾನ ಪರಿಷತ್ ಟಿಕೆಟ್ ಸಿಕ್ಕಿದೆ. ಮೈತ್ರಿ ಸರ್ಕಾರ ಪತನಕ್ಕೆ ಕಾರಣವಾಗಿದ್ದ ಎಂಟಿಬಿ ನಾಗರಾಜ್, ಆರ್.ಶಂಕರ್ ಗೆ ನೀಡಿದ ಮಾತನ್ನು ಸಿಎಂ ಯಡಿಯೂರಪ್ಪ ಉಳಿಸಿಕೊಂಡಿದ್ದಾರೆ. ಆದರೆ ವಿಶ್ವನಾಥ್ ಅವರಿಗೆ ಟಿಕೆಟ್ ಕೊಡಿಸುವಲ್ಲಿ ಸಿಎಂ ವಿಫಲವಾಗಿದ್ದಾರೆ.



