ಡಿವಿಜಿ ಸುದ್ದಿ, ಹಾವೇರಿ: ನಾನು ಮೂರು ಬಾರಿ ಶಾಸಕನಾಗಿದ್ದು, ಪಕ್ಷದಲ್ಲಿ ಸಿನೀಯರ್ ಇದ್ದೀನಿ. ನನಗೂ ಸಚಿವ ಸ್ಥಾನ ನೀಡಿ ಎಂದು ಹಾವೇರಿ ಶಾಸಕ ನೆಹರು ಓಲೇಕಾರ ಆಗ್ರಹಿಸಿದ್ದಾರೆ.
ಹಾವೇರಿಯಲ್ಲಿ ಮಾಯತನಾಡಿದ ಅವರು, ಜನವರಿ 29ಕ್ಕೆ ಸಚಿವ ಸಂಪುಟ ವಿಸ್ತರಣೆ ನಡೆಯಲಿದೆ ಎಂದು ಸಿಎಂ ಯಡಿಯೂರಪ್ಪ ಅವರು ಹೇಳಿದ್ದಾರೆ. ಸಚಿವ ಸಂಪುಟದಲ್ಲಿ ಎಲ್ಲಾ ಸಮುದಾಯದವರು ಇದ್ದರೆ ಗೌರವ ಇರುತ್ತೆ. ಸಚಿವ ಸ್ಥಾನಕ್ಕೆ ಮಠಾದೀಶರು ಸೇರಿದಂತೆ ಎಲ್ಲರೂ ಸಿಎಂ ಮೇಲೆ ಒತ್ತಡ ಹಾಕುತ್ತಿದ್ದಾರೆ ಎಂದರು.
17 ಜನರಿಂದಲೇ ಬಿಜೆಪಿ ಸರ್ಕಾರ ಬಂದಿದೆ. ಅವರ ತ್ಯಾಗದಿಂದಲೇ ಯಡಿಯೂರಪ್ಪ ಅವರು ಸಿಎಂ ಆಗಿದ್ದಾರೆ. ಅವರಿಗೆ ಸಚಿವ ಸ್ಥಾನ ಕೊಡಲು ತಕರಾರಿಲ್ಲ ಎಂದರು .
ಸೋತವರಿಗೆ ನಿಗಮ ಮಂಡಳಿ ಅಧ್ಯಕ್ಷಗಿರಿ ಕೊಟ್ಟು ತೃಪ್ತಿ ಮಾಡಬೇಕು. ಸೋತವರಿಗೆ ಸಚಿವ ಸ್ಥಾನ ಕೊಟ್ಟರೆ ಜನರು ತಪ್ಪಾಗಿ ಮಾತನಾಡಿಕೊಳ್ತಾರೆ. ಹಿರಿಯರಿಗೆ ಪಕ್ಷ ಸಂಘಟನೆ ಜವಾಬ್ದಾರಿ ಕೊಡುವ ಬಗ್ಗೆ ಪಕ್ಷದ ನಾಯಕರು ಚರ್ಚಿಸಿದ್ದಾರೆ. ಹಿರಿಯರನ್ನ ಕೈಬಿಟ್ಟು ಹೊಸಬರಿಗೆ ಕೊಡೋ ವಿಚಾರವಿದೆ ಎಂದು ತಿಳಿದಿದೆ ಎಂದರು.



