ಡಿವಿಜಿ ಸುದ್ದಿ, ನಾಯಕನಹಟ್ಟಿ: ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಕೇವಲ ಊಹಾಪೋಹವಷ್ಟೇ, ಮುಂದಿನ ಮೂರು ವರ್ಷ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಮುಂದುವರಿಯಲಿದ್ದಾರೆ ಎಂದು ಆರೋಗ್ಯ ಸಚಿವ ಬಿ. ಶ್ರೀರಾಮುಲು ಹೇಳಿದರು.
ನಾಯಕನಹಟ್ಟಿ ಪಟ್ಟಣದ ಗುರುತಿಪ್ಪೇರುದ್ರಸ್ವಾಮಿ ಚಿಕ್ಕಕೆರೆಯಲ್ಲಿ ಭದ್ರಾ ಮೇಲ್ದಂಡೆ ಯೋಜನೆಯಡಿ 59 ಕೆರೆಗಳಿಗೆ ನೀರು ತುಂಬಿಸುವ ಪೈಪ್‌ಲೈನ್ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿ ಅವರು ಮಾತನಾಡಿದರು.
ಡಿಸಿಎಂ ಲಕ್ಷ್ಮಣ ಸವದಿ, ಶಶಿಕಲಾ ಜೊಲ್ಲೆ ಅವರು ಪೂರ್ವ ನಿರ್ಧರಿತ ಕಾರ್ಯಕ್ರಮದ ಉದ್ದೇಶದಿಂದ ದೆಹಲಿಗೆ ಹೋಗಿ ಬಂದಿದ್ದಾರೆ. ಯಾವ ನಾಯಕರೂ ನಾಯಕತ್ವ ಬದಲಾವಣೆ ಬಗ್ಗೆ ಗುಪ್ತ ಸಭೆ ನಡೆಸಿಲ್ಲ. ಮುಂದೆಯೂ ನಡೆಸುವುದಿಲ್ಲ. ಸಿಎಂ ಪ್ರಶ್ನಾತೀತ ನಾಯಕ. ಇದರಲ್ಲಿ ಯಾವುದೇ ಅನುಮಾನ ಬೇಡ ಎಂದರು.
ಯಡಿಯೂರಪ್ಪ ಅವರು ಆದಷ್ಟು ಬೇಗ ಅವರು ಗುಣಮುಖರಾಗಲಿ. ರಾಜ್ಯವನ್ನು ಇನ್ನಷ್ಟು ಅಭಿವೃದ್ಧಿಯತ್ತ ಕೊಂಡೊಯ್ಯವ ಶಕ್ತಿ ನೀಡುವಂತಾಗಲಿ ಎಂದು ಹೇಳಿದರು.



