ಡಿವಿಜಿ ಸುದ್ದಿ, ಮೈಸೂರು: 17 ಶಾಸಕರು ರಾಜೀನಾಮೆಯಿಂದ ಬಿಜೆಪಿ ಸರ್ಕಾರ ಬಂದಿದೆ. ರಾಜೀನಾಮೆ ಕೊಟ್ಟವರಿಗೆ ಸಚಿವ ಸ್ಥಾನ ನೀಡದೆ ತಾಳ್ಮೆ ಪರೀಕ್ಷಿಸಬೇಡಿ ಎಂದು ಸಂಸದ ಶ್ರೀನಿವಾಸ್ ಪ್ರಸಾದ್ ಹೇಳಿದ್ದಾರೆ.
ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ 17 ಜನ ಜೊತೆ ವೈಯಕ್ತಿಕವಾಗಿ ಮಾತನಾಡಿದ ನಂತರವೇ ಅವರು ರಾಜೀನಾಮೆ ಕೊಟ್ಟಿದ್ದಾರೆ. ಅವರು ಏನು ಮಾತನಾಡಿದ್ದಾರೆ ಎಂಬುದು ನನಗೆ ಗೊತ್ತಿಲ್ಲ. ಆದರೆ, 17 ಜನಕ್ಕೂ ಸಚಿವ ಸ್ಥಾನ ನೀಡುವುದಾಗಿ ಭರವಸೆ ನೀಡಿದ್ದ ಸಿಎಂ, ಕೊಟ್ಟ ಮಾತು ಉಳಿಸಿಕೊಳ್ಳಬೇಕಿದೆ ಎನ್ನುವ ಮೂಲಕ ಉಪ ಚುನಾವಣೆಯಲ್ಲಿ ಸೋತಿರುವ ಮಾಜಿ ಸಚಿವ ಎಚ್. ವಿಶ್ವಾನಾಥ್ ಹಾಗೂ ಎಂಟಿಬಿ ನಾಗರಾಜ್ ಪರ ಬ್ಯಾಟ್ ಬೀಸಿದರು.
ಸಂಪುಟ ವಿಸ್ತರಣೆ ವಿಳಂಬ ಮಾಡದೇ ಇವತ್ತೇ ವರಿಷ್ಠರ ಜೊತೆ ಮಾತನಾಡಿ ಮುಖ್ಯಮಂತ್ರಿ ಬಗೆಹರಿಸಿಕೊಂಡು ಬರಬೇಕು. ಈ ಮೂಲಕ ಪರಿಪೂರ್ಣ ಸಂಪುಟದೊಂದಿಗೆ ರಾಜ್ಯದಲ್ಲಿ ಉತ್ತಮ ಆಡಳಿತ ನೀಡಬೇಕಿದೆ. ಯಡಿಯೂರಪ್ಪ ಕೊಟ್ಟ ಮಾತು ಉಳಿಸಿಕೊಳ್ಳುವ ವಿಶ್ವಾಸವಿದೆ ಎಂದು ಹೇಳಿದರು.