ದೆಹಲಿ: ಸಚಿವ ಸ್ಥಾನ ಆಕಾಂಕ್ಷಿಯಾಗಿರುವ ಹೊನ್ನಾಳಿ ಶಾಸಕ ರೇಣುಕಾಚಾರ್ಯ ಅವರು ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಅವರನ್ನು ಭೇಟಿಯಾಗಿದ್ದಾರೆ.
ಸಚಿವ ಸಂಪುಟ ವಿಸ್ತರಣೆ ಹಿನ್ನೆಲೆ ದೆಹಲಿಗೆ ಭೇಟಿ ನೀಡಿರುವ ರೇಣುಕಾರ್ಚಾರ್ಯ, ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ದೆಹಲಿಗೆ ಭೇಟಿ ನೀಡುವ ಮುನ್ನ ದೆಹಲಿಯಲ್ಲಿ ಬೀಡು ಬಿಟ್ಟಿದ್ದಾರೆ. ಸಚಿವ ಸ್ಥಾನದ ಪ್ರಬಲ ಆಕಾಂಕ್ಷಿಯಾಗಿರುವ ರೇಣುಕಾಚಾರ್ಯ ಇಂದು ಬಿ.ಎಲ್. ಸಂತೋಷ್ ಅವರನ್ನು ಭೇಟಿ ಮಾಡಿದ್ದಾರೆ .
ಇದಕ್ಕೂ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿದ್ದ ಅವರು, ಮಧ್ಯ ಕರ್ನಾಟಕದ ದಾವಣಗೆರೆ ಜಿಲ್ಲೆಗೆ ಅಭಿವೃದ್ಧಿ ದೃಷ್ಠಿಯಿಂದ ಒಂದು ಸಚಿವ ಸ್ಥಾನ ನೀಡಬೇಕಿದೆ. ಈ ಬಗ್ಗೆ ನಾನು ಕೂಡ ಒಬ್ಬ ಆಕಾಂಕ್ಷಿಯಾಗಿದ್ದೇನೆ. ಆದರೆ, ಈ ಬಗ್ಗೆ ಲಾಬಿ ಮಾಡಲ್ಲ ಎಂದರು.



