Connect with us

Dvgsuddi Kannada | online news portal | Kannada news online

ಕುಮಾರಸ್ವಾಮಿ ಪಾಕಿಸ್ತಾನಕ್ಕೆ ಹೋಗಿ ನೆಲೆಸಲಿ: ಶ್ರೀರಾಮುಲು

ಪ್ರಮುಖ ಸುದ್ದಿ

ಕುಮಾರಸ್ವಾಮಿ ಪಾಕಿಸ್ತಾನಕ್ಕೆ ಹೋಗಿ ನೆಲೆಸಲಿ: ಶ್ರೀರಾಮುಲು

ಡಿವಿಜಿ ಸುದ್ದಿ, ಚಿತ್ರದುರ್ಗ:  ನೆರೆಯ ಪಾಕಿಸ್ತಾನದ ಮೇಲೆ ಪ್ರೀತಿ ತೋರುತ್ತಿರುವ ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಅವರು ನಮ್ಮ ದೇಶ ತೊರೆದು, ಪಾಕಿಸ್ತಾನಕ್ಕೆ ಹೋಗಿ ನೆಲೆಸಲಿ ಎಂದು ಆರೋಗ್ಯ ಸಚಿವ ಬಿ.ಶ್ರೀರಾಮುಲು ವಾಗ್ದಾಳಿ ನಡೆಸಿದರು.

ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಭಾರತ ಹಿಂದೂ ರಾಷ್ಟ್ರ. ಇಲ್ಲಿ ಎಲ್ಲರೂ ಸಮಾನರು. ವೋಟ್ ಬ್ಯಾಂಕ್ ರಾಜಕಾರಣಕ್ಕೆ ದೇಶದ ಹಿತಾಸಕ್ತಿ ಬಲಿಕೊಡಲು ಬಿಜೆಪಿ ಬಿಡುವುದಿಲ್ಲ ಎಂದು ಕುಮಾರಸ್ವಾಮಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ರಾಜಕಾರಣದಲ್ಲಿ ಕುಮಾರಸ್ವಾಮಿ  ಗಂಭೀರ ರಾಜಕಾರಣಿಯಾಗಿ ಉಳಿದಿಲ್ಲ. ಅವರು ಮಾಜಿ ಮುಖ್ಯಮಂತ್ರಿ, ಮಾಜಿ ಪ್ರಧಾನಿ ಅವರ ಪುತ್ರರಾಗಿದ್ದರೂ,  ಪಾಕಿಸ್ತಾನದ ಬಗ್ಗೆ ಪ್ರೀತಿ ತೋರುವುದು ನೋವು ತಂದಿದೆ ಎಂದರು.

ಡೆತ್ ಪಾರ್ಟಿ ಅಧ್ಯಕ್ಷ ಸ್ಥಾನಕ್ಕೆ ಕಿತ್ತಾಟ

ಇಡೀ ದೇಶದಲ್ಲಿ ಕಾಂಗ್ರೆಸ್ ಪಕ್ಷ ಸತ್ತು ಹೋಗಿದೆ. ಇಂತಹ ಡೆತ್ ಪಾರ್ಟಿಯ ಅಧ್ಯಕ್ಷ ಸ್ಥಾನಕ್ಕೆ ರಾಜ್ಯದಲ್ಲಿ  ಕಿತ್ತಾಟ ನಡೆಯುತ್ತಿದೆ. ವಿರೋಧ ಪಕ್ಷದ ನಾಯಕ ಸ್ಥಾನಕ್ಕೂ ಲಾಬಿ ನಡೆಯುತ್ತಿದೆ. ಸಿದ್ದರಾಮಯ್ಯ ಅವರಿಗೆ ಪಕ್ಷದಲ್ಲೇ ಸಹಮತವಿಲ್ಲ. ಇಂಗ್ಲಿಷ್ ಪದ ಬಳಸಿ ಆಗಾಗ ಬಿಜೆಪಿ ಟೀಕೆ ಮಾಡುವುದು ಸಿದ್ದರಾಮಯ್ಯಗೆ  ಅಭ್ಯಾಸವಾಗಿದೆ ಎಂದರು.

 

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

To Top