ಡಿವಿಜಿ ಸುದ್ದಿ, ಧಾರವಾಡ: ಪೌರತ್ವ ಕಾಯ್ದೆ ವಿರೋಧಿಸಿ ರಾಜ್ಯದಲ್ಲಿ ಬೆಂಕಿ ಬೀಳುತ್ತೆ ಎಂದು ಪ್ರಚೋದನಾತ್ಮ ಹೇಳಿಕೆ ನೀಡಿದ್ದ ಮಾಜಿ ಸಚಿವ ಯು.ಟಿ. ಖಾದರ್ ತಿರುಗೇಟು ನೀಡಿದ ಸಚಿವ ಕೋಟ ಶ್ರೀನಿವಾಸ ಪೂಜಾರಿ, ನೀವು ಬೆಂಕಿ ಹಚ್ಚಿದ್ರೆ, ನಾವು ನೀರು ಹಾಕಿ ನಂದಿಸುತ್ತೇವೆ ಎಂದಿದ್ದಾರೆ.
ಸುದ್ದಿಗಾರೊಂದಿಗೆ ಮಾತನಾಡಿದ ಅವರು, ಪ್ರಜಾಪ್ರಭುತ್ವದ ದೇಗುಲವಾದ ಸಂಸತ್‍ನಲ್ಲಿ ಪೌರತ್ವ ಕಾಯ್ದೆ ತಿದ್ದುಪಡಿಯಾಗಿ ರೂಪಗೊಂಡಿದೆ. ಬಹುಮತದಿಂದ ತಿದ್ದುಪಡಿ ಮಸೂದೆ ಕಾಯ್ದೆಯಾಗಿ ಜಾರಿಗೆ ಬಂದಿದೆ. ಈ ತಿದ್ದುಪಡಿ ಕಾಯ್ದೆಯನ್ನು ಇಡೀ ರಾಷ್ಟ್ರದ ಜನತೆ ಸ್ವಾಗತಿಸಿದ್ದಾರೆ. ಆದರೆ ಅಧಿಕಾರ ಕಳೆದುಕೊಂಡ ಕೆಲವರು ರಾಜಕೀಯ ಪ್ರೇರಿತದಿಂದ ಜನರಿಗೆ ತಪ್ಪು ಸಂದೇಶ ರವಾನೆಯಾಗುತ್ತಿದೆ ಎಂದು ಕಿಡಿಕಾರಿದರು.
ವರುಣ ದೇವನ ಕೃಪೆಯಿಂದ ಕರ್ನಾಟಕದಲ್ಲಿ ಸಮೃದ್ಧವಾದ ಜಲ ಶಕ್ತಿ ಇದೆ. ನೀವು ಹಾಕುವ ಬೆಂಕಿಗೆ ನೀರು ಹಾಕುವ ಸಾಮರ್ಥ್ಯ ನಮಗಿದೆ ಎಂದರು.
ಮಠಗಳಿಗೆ 60 ಕೋಟಿ ಹಣ
60 ಕೋಟಿ ಹಣವನ್ನು ಮಠಗಳಿಗೆ ನೀಡುವ ಪ್ರಸ್ತಾಪ ಸರ್ಕಾರದ ಮುಂದಿದೆ. ಯಾವುದೇ ಮಠಗಳನ್ನು ನಿರ್ಲಕ್ಷ್ಯ ಮಾಡುವುದಿಲ್ಲ. ಸರ್ಕಾರ ಹಣ ನೀಡಿದ್ದರೂ ಅದನ್ನು ನಾವು ನ್ಯಾಯ ಸಮ್ಮತವಾಗಿ ತಲುಪಿಸುತ್ತೇವೆ. ಮಠಗಳಿಗೆ ನೀಡುವ ಹಣವನ್ನು ಯಾವ ದೇವಸ್ಥಾನಕ್ಕೆ ನೀಡುತ್ತಿಲ್ಲ ಎಂದರು.