ಡಿವಿಜಿ ಸುದ್ದಿ, ಬೆಂಗಳೂರು: ಉಪ ಚುನಾವಣೆದಲ್ಲಿ ಕಾಂಗ್ರೆಸ್ ಪಕ್ಷದ ಸೋಲಿನ ಹೊಣೆ ಹೊತ್ತು ಮಾಜಿ ಸಿಎಂ ಸಿದ್ದರಾಮಯ್ಯನವರು ಸಿಎಲ್‍ಪಿ ನಾಯಕನ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
ಮತದಾರರ ತೀರ್ಪನ್ನು ನಾನು ಗೌರವಿಸುತ್ತೇನೆ. ಕುದುರೆ ವ್ಯಾಪಾರಕ್ಕೆ ಒಳಗಾಗಿದ್ದವರಿಗೆ ಜನರು ಶಿಕ್ಷೆ ನೀಡುತ್ತಾರೆಂಬ ನಿರೀಕ್ಷೆ ಇತ್ತು.ಆದರೆ, ನನ್ನ ನಿರೀಕ್ಷೆ ಹುಸಿಯಾಗಿದ್ದು, ಜನಾದೇಶ ನಮ್ಮ ನಿರೀಕ್ಷೆಗೆ ವಿರುದ್ಧವಾಗಿ ಬಂದಿದೆ. ಇನ್ನು ನಾವು ಒಪ್ಪಿಕೊಂಡಿದ್ದೇನೆ. ಹೀಗಾಗಿ ಇದರ ಹೊಣೆ ಹೊತ್ತು ಕಾಂಗ್ರೆಸ್ ಶಾಸಕಾಂಗ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದು, ವಿಪಕ್ಷ ನಾಯಕನಾಗಿ ಮುಂದುವರಿಯುತ್ತಿದ್ದೇನೆ ಎಂದು ಸಿದ್ದರಾಮಯ್ಯ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ರಾಜೀನಾಮೆ ಪತ್ರವನ್ನು ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿಯವರಿಗೆ ನೀಡಿದ್ದೇನೆ. ಉಪ ಚುನಾವಣೆಯಲ್ಲಿ ಕಾಂಗ್ರೆಸ್ 15ರಲ್ಲಿ ಕೇವಲ 2 ಕ್ಷೇತ್ರಗಳಲ್ಲಿ ಮಾತ್ರ ಜಯಗಳಿಸಿದೆ. ಚುನಾವಣೆಯ ಉಸ್ತುವಾರಿ ಹೊತ್ತಿದ್ದ ಮಾಜಿ ಸಿಎಂ ಸಿದ್ದರಾಮಯ್ಯ ವಿಪಕ್ಷ ಸ್ಥಾನಕ್ಕೆ ರಾಜೀನಾಮೆ ಕೂಡ ರಾಜೀನಾಮೆ ನೀಡಲಿದ್ದಾರೆ ಎನ್ನುವ ಸುದ್ದಿ ಹರಡಿತ್ತು. ಸಿಎಲ್ ಪಿ ನಾಯಕ ಸ್ತಾನಕ್ಕೆ ಮಾತ್ರ ರಾಜೀನಾಮೆ ನೀಡಿದ್ದ, ವಿಪಕ್ಷ ನಾಯಕರಾಗಿ ಮುಂದುವರಿಯಲಿದ್ದಾರೆ.
ಉಪ ಚುನಾವಣೆ ನಡೆದ 15 ಕ್ಷೇತ್ರಕ್ಕೂ ಸಿದ್ದರಾಮಯ್ಯ ತಮ್ಮ ಆಪ್ತರಿಗೆ ಮಣಿ ಹಾಕಿದ್ದರು. ಆದರೆ, ಚುನಾವಣೆಯಲ್ಲಿ ನಿರೀಕ್ಷಿತ ಫಲಿತಾಂಶ ವ್ಯತಿರೀಕ್ತವಾಗಿ ಬಂದಿದೆ. ಚುನಾವಣೆ ಟಿಕೆಟ್ ನೀಡುವ ಸಂದರ್ಭದಲ್ಲಿ ಕಾಂಗ್ರೆಸ್ ಹಿರಿಯ ನಾಯಕರು ಅಭಿಪ್ರಾಯ ಪರಿಗಣಿಸಿಲ್ಲ ಎಂದು ಪ್ರಚಾರದಿಂದ ದೂರನೇ ಉಳಿದಿದ್ದ ಮೂಲ ಕಾಂಗ್ರೆಸಿಗರು ಸಿದ್ದರಾಮಯ್ಯ ನಾಯಕತ್ವದ ಬಗ್ಗೆ ಪ್ರಶ್ನೆ ಎತ್ತಿದ್ದರು. ಹುಣಸೂರಿನಲ್ಲಿ ಹೆಚ್.ಪಿ. ಮಂಜುನಾಥ್ ಮತ್ತು ಶಿವಾಜಿ ನಗರದಲ್ಲಿ ರಿಜ್ವಾನ್ ಅರ್ಷದ್ ಮಾತ್ರ ಗೆಲುವಿನ ನಗೆ ಬೀರಿದ್ದು ಬಿಟ್ಟರೆ, ಇನ್ಯಾರರು ಕೂಡ ಗೆಲುವು ಸಾಧಿಸಲಿಲ್ಲ.



