Connect with us

Dvg Suddi-Kannada News

ಬಸನಗೌಡ ಪಾಟೀಲ್ ಯತ್ನಾಳ್ ಅಮಾನತ್ತಿಗೆ ಸಿದ್ದರಾಮಯ್ಯ ಆಗ್ರಹ

ಪ್ರಮುಖ ಸುದ್ದಿ

ಬಸನಗೌಡ ಪಾಟೀಲ್ ಯತ್ನಾಳ್ ಅಮಾನತ್ತಿಗೆ ಸಿದ್ದರಾಮಯ್ಯ ಆಗ್ರಹ

ಡಿವಿಜಿ ಸುದ್ದಿ, ಬೆಂಗಳೂರು: ಸ್ವಾತಂತ್ರ್ಯ ಹೋರಾಟಗಾರ ದೊರೆಸ್ವಾಮಿ ಅವರಿಗೆ ಅವಮಾನಿಸಿದ  ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಅವರನ್ನು ಅಮಾನತ್ತು ಮಾಡಬೇಕು ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.

ಈ ಕುರಿತು ಸರಣಿ ಟ್ವೀಟ್ ಮಾಡಿರುವ ಅವರು, ಸದನಕ್ಕೆ ಅಗೌರವ ತೋರುವ‌ ಸದಸ್ಯರನ್ನು ಅಮಾನತು ಮಾಡಬೇಕೆಂದು ಮಧ್ಯಪ್ರದೇಶ ಹೈಕೋರ್ಟ್ ಆದೇಶ ನೀಡಿತ್ತು. ಆ ತೀರ್ಪನ್ನು ಆಧಾರವಾಗಿಟ್ಟುಕೊಂಡು ಯತ್ನಾಳ್ ಅವರನ್ನು ಅಮಾನತು ಮಾಡುವಂತೆ ಸಭಾಧ್ಯಕ್ಷರಲ್ಲಿ ಒತ್ತಾಯ ಮಾಡಿದ್ದೇವೆ. ಆದರೆ ನಮಗೆ ಮಾತನಾಡಲು ಅವಕಾಶವನ್ನೇ ನೀಡದಿರುವ ಸಭಾಧ್ಯಕ್ಷರ ವರ್ತನೆ ಸರಿ ಅಲ್ಲ ಎಂದು ಕಿಡಿಕಾರಿದ್ದಾರೆ.

ಸಂವಿಧಾನದ ಹೆಸರಲ್ಲಿ ಪ್ರಮಾಣ ಮಾಡಿದವರು ಒಬ್ಬ ಹಿರಿಯ ಸ್ವಾತಂತ್ರ್ಯ ಹೋರಾಟಗಾರನನ್ನು ಅವಮಾನಿಸಿರುವುದು ಸಂವಿಧಾನಕ್ಕೆ ಮಾಡಿರುವ ಅವಮಾನ. ಇಂತಹ ದೇಶದ್ರೋಹಿಗಳ ಜೊತೆ ಕಲಾಪದಲ್ಲಿ ಕುಳಿತುಕೊಳ್ಳಲು ನಾವು ಸಿದ್ಧರಿಲ್ಲ. ಅವರನ್ನು ಸಭಾಧ್ಯಕ್ಷರು ತಕ್ಷಣ ಅಮಾನತು ಮಾಡಬೇಕು ಎಂದು ಒತ್ತಾಯಿಸಿದ್ದಾರೆ.

ಬಿಜೆಪಿ ನಾಯಕರು, ಮಂತ್ರಿಗಳು ಯತ್ನಾಳ್ ಹೇಳಿಕೆಯನ್ನು ಖಂಡಿಸುವ ಬದಲು ಬೆಂಬಲಿಸಿ ಮಾತನಾಡುತ್ತಾರೆ. ಪಕ್ಷದ ಶಾಸಕನೊಬ್ಬ ದೇಶದ ಸ್ವಾತಂತ್ರ್ಯ ಚಳುವಳಿಗೆ, ಸ್ವಾತಂತ್ರ್ಯ ಹೋರಾಟಗಾರರಿಗೆ ಅವಮಾನಿಸುವುದು ವೈಯಕ್ತಿಕ ಅಭಿಪ್ರಾಯ ಹೇಗಾಗುತ್ತದೆ? ಹಾಗಾದರೆ ಯತ್ನಾಳ್ ಹೇಳಿಕೆಗೆ ಬಿಜೆಪಿ ಸಮ್ಮತಿ ಇದೆಯೇ ಎಂಬುದನ್ನು ಅಧಿಕೃತವಾಗಿ ಸ್ಪಷ್ಟಪಡಿಸಲಿ ಎಂದಿದ್ದಾರೆ.

ಸ್ವಾತಂತ್ರ್ಯ ಹೋರಾಟಗಾರ ದೊರೆಸ್ವಾಮಿಯವರನ್ನು ಒಂದು ಪಕ್ಷಕ್ಕೆ ಕಟ್ಟಿಹಾಕುವುದು ಸರಿಯಲ್ಲ. ಅವರು ಹಿಂದೆಯೂ ತುರ್ತುಪರಿಸ್ಥಿತಿ ಕಾಲದಲ್ಲಿ ಇಂದಿರಾ ಗಾಂಧಿ ವಿರುದ್ಧವೂ ಪ್ರತಿಭಟಿಸಿದ್ದರು. ನಾನು ಮುಖ್ಯಮಂತ್ರಿಯಾಗಿದ್ದಾಗ ನಮ್ಮ ಸರ್ಕಾರದ ವಿರುದ್ಧವೂ ಪ್ರತಿಭಟನೆ ನಡೆಸಿದ್ದರು ಎಂದರು.

 

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

Advertisement Enter ad code here
Advertisement

ದಾವಣಗೆರೆ

Advertisement

ಪ್ರಮುಖ ಸುದ್ದಿ

News

Advertisement
Advertisement e

namma davanagere

ಸಿದ್ದನೂರು ಮತ್ತು ಅಗಸನಕಟ್ಟೆಯ ನಿಕ್ರಾ ಯೋಜನೆಯ ದೃಶ್ಯಾವಳಿ

Advertisement
To Top