ಡಿವಿಜಿ ಸುದ್ದಿ, ದಾವಣಗೆರೆ: ದಾವಣಗೆರೆ ಜಿಲ್ಲೆಯ ಹರಿಹರದ ಪಂಚಮಸಾಲಿ ಮಠದಲ್ಲಿ ಪ್ರಥಮ ಹರ ಜಾತ್ರಾ ಮಹೋತ್ಸವದಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಮಾಜಿ ಸಚಿವ ಡಿ.ಕೆ.ಶಿವಕುಮಾರ್ ನಾಳೆ ಭಾಗವಹಿಸಲಿದ್ದಾರೆ.
ಬೆಳಗ್ಗೆಯ ಕಾರ್ಯಕ್ರಮದಲ್ಲಿ ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯನವರು ಭಾಗವಹಿಸಲಿದ್ದು, ಮಧ್ಯಾಹ್ನ 2 ಗಂಟೆಗೆ ನಂತರ ನಡೆಯುವ ಕಾರ್ಯಕ್ರಮದಲ್ಲಿ ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಭಾಗಿಯಾಗಲಿದ್ದಾರೆ. ನಗರದ ಅಪೂರ್ವ ರೆಸಾರ್ಟ್‍ನಿಂದ ಪಂಚಮಸಾಲಿ ಮಠದ ವರೆಗೆ ಜಿಲ್ಲಾ ಕಾಂಗ್ರೆಸ್ ಕಾರ್ಯಕರ್ತರು ಬೈಕ್ ರ್ಯಾಲಿ ಮೂಲಕ ಉತ್ಸವಕ್ಕೆ ಡಿ.ಕೆ.ಶಿವಕುಮಾರ್ ಅವರನ್ನು ಕರೆದುಕೊಂಡು ಹೋಗಲಿದ್ದಾರೆ.
ಈ ರ್ಯಾಲಿಯಲ್ಲಿ ಕಾಂಗ್ರೆಸ್ ಪಕ್ಷದ ಎಲ್ಲಾ ಜನಪ್ರತಿನಿಧಿಗಳು, ಮಹಿಳಾ ಕಾಂಗ್ರೆಸ್, ಯುವ ಕಾಂಗ್ರೆಸ್, ಎನ್ ಎಸ್‍ಯುಐ, ಪರಿಶಿಷ್ಟ ಜಾತಿ ಮತ್ತು ಪಂಗಡ ವಿಭಾಗ, ಓಬಿಸಿ, ಅಲ್ಪಸಂಖ್ಯಾತರ ವಿಭಾಗ, ವಿಕಲಚೇತರ ಘಟಕದ ಅಧ್ಯಕ್ಷರು ಮತ್ತು ಪದಾಧಿಕಾರಿಗಳು, ಮಹಾನಗರ ಪಾಲಿಕೆ, ಜಿಲ್ಲಾ ಪಂಚಾಯಿತಿ, ತಾಲ್ಲೂಕು ಪಂಚಾಯಿತಿ, ಗ್ರಾಮ ಪಂಚಾಯಿತಿ ಸದಸ್ಯರುಗಳು, ಎಪಿಎಂಸಿ ಅಧ್ಯಕ್ಷರು ಮತ್ತು ಸದಸ್ಯರುಗಳು, ಮುಖಂಡರು, ಕಾರ್ಯಕರ್ತರು, ಅಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುವಂತೆ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹೆಚ್.ಬಿ.ಮಂಜಪ್ಪನವರು ಕೋರಿದ್ದಾರೆ.



