ಡಿವಿಜಿ ಸುದ್ದಿ, ಬೆಂಗಳೂರು: ಬಿಜೆಪಿ ನಾಯಕರ ಪ್ರಚೋದನಕಾರಿ ಹೇಳಿಕೆ ವಿರುದ್ಧ ಕಿಡಿಕಾರಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಸಿಎಂ ಯಡಿಯೂರಪ್ಪಗೆ ಎಚ್ಚರಿಕೆ ನೀಡಿದ್ದಾರೆ. ಮಾನ್ಯ ಮುಖ್ಯಮಂತ್ರಿಗಳಾದ ಬಿ.ಎಸ್. ಯಡಿಯೂರಪ್ಪ ಅವರೇ ಪರಿಸ್ಥಿತಿ ಕೈ ಮೀರಿ ಹೋಗುವ ಮುನ್ನ ಎಚ್ಚೆತ್ತುಕೊಳ್ಳಿ. ದೆಹಲಿ ಗಲಭೆ ಕಣ್ಣ ಮುಂದಿದೆ ಎಂದು ಟ್ವೀಟರ್ ಎಚ್ಚರಿಕೆ ನೀಡಿದ್ದಾರೆ.
ಒಬ್ಬರಾದ ಮೇಲೆ ಒಬ್ಬರಂತೆ ಪ್ರಚೋದನಾಕಾರಿ ಹೇಳಿಕೆ ನೀಡುತ್ತಿರುವ ರಾಜ್ಯದ ಬಿಜೆಪಿ ನಾಯಕರ ನಾಲಗೆಗೆ ತಕ್ಷಣ ಕಡಿವಾಣ ಹಾಕಬೇಕಿದೆ. ಕಡಿವಾಣ ಹಾಕದಿದ್ದರೆ ಅನಾಹುತ ಕಾದಿದೆ’ ಎಂದು ದೆಹಲಿ ಗಲಭೆ ಉದಾಹರಣೆ ನೀಡಿ ಎಚ್ಚರಿಕೆ ನೀಡಿದ್ದಾರೆ.
ಮಾನ್ಯ ಮುಖ್ಯಮಂತ್ರಿಗಳಾದ @BSYBJP ಅವರೇ,
ಕೈ ಮೀರಿ ಹೋಗುವ ಮುನ್ನ ಎಚ್ಚೆತ್ತುಕೊಳ್ಳಿ.
ದೆಹಲಿ ಗಲಭೆ ಕಣ್ಣ ಮುಂದಿದೆ.ಒಬ್ಬರಾದ ಮೇಲೆ ಒಬ್ಬರಂತೆ ಪ್ರಚೋದನಾಕಾರಿ ಹೇಳಿಕೆ ನೀಡುತ್ತಿರುವ ರಾಜ್ಯದ ಬಿಜೆಪಿ ನಾಯಕರ ನಾಲಗೆಗೆ ತಕ್ಷಣ ಕಡಿವಾಣ ಹಾಕದಿದ್ದರೆ
ಅನಾಹುತ ಕಾದಿದೆ.
2/2— Siddaramaiah (@siddaramaiah) February 25, 2020
ಮತ್ತೆ ಮುಂದುವರಿದು ಮತ್ತೊಂದು ಟ್ವೀಟ್ ಮಾಡಿದ್ದು, ಅದರಲ್ಲಿ ಮುಖ್ಯಮಂತ್ರಿಗಳಾದ ಬಿಎಸ್‌ವೈ ಅವರೇ, ಹಿರಿಯ ಸ್ವಾತಂತ್ರ್ಯ ಹೋರಾಟಗಾರರಾದ ಎಚ್.ಎಸ್. ದೊರೆಸ್ವಾಮಿಯವರನ್ನು ನಿಂದಿಸಿ ಅತ್ಯಂತ ಕೀಳಾಗಿ ಮಾತನಾಡಿರುವ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಕ್ರಮಕೈಗೊಂಡು ಬಾಯಿ ಮುಚ್ಚಿಸಿ. ಇಲ್ಲವಾದರೆ ಅವರ ಅಭಿಪ್ರಾಯ ನಿಮ್ಮ ಸರ್ಕಾರದ ಅಭಿಪ್ರಾಯ ಎಂದು ಒಪ್ಪಿಕೊಳ್ಳಿ ಎಂದು ಆಗ್ರಹಿಸಿದ್ದಾರೆ.
ಮುಖ್ಯಮಂತ್ರಿಗಳಾದ @BSYBJP ಅವರೇ,
ಹಿರಿಯ ಸ್ವಾತಂತ್ರ್ಯಹೋರಾಟಗಾರರಾದ ಎಚ್.ಎಸ್.ದೊರೆಸ್ವಾಮಿಯವರನ್ನು ನಿಂದಿಸಿ ಅತ್ಯಂತ ಕೀಳಾಗಿ ಮಾತನಾಡಿರುವ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಕ್ರಮಕೈಗೊಂಡು ಬಾಯಿ ಮುಚ್ಚಿಸಿ,
ಇಲ್ಲವಾದರೆ ಅವರ ಅಭಿಪ್ರಾಯ ನಿಮ್ಮ ಸರ್ಕಾರದ ಅಭಿಪ್ರಾಯ ಎಂದು ಒಪ್ಪಿಕೊಳ್ಳಿ.
1/2— Siddaramaiah (@siddaramaiah) February 25, 2020



