Connect with us

Dvg Suddi-Kannada News

ನೂರು ದಿನದಲ್ಲಿ ವಿಡಿಯೋ ಸಹಿತ ಸಾಕ್ಷ್ಯ ಕೊಟ್ಟ ಯಡಿಯೂರಪ್ಪ; ಸಿದ್ದರಾಮಯ್ಯ ವ್ಯಂಗ್ಯ

ರಾಜಕೀಯ

ನೂರು ದಿನದಲ್ಲಿ ವಿಡಿಯೋ ಸಹಿತ ಸಾಕ್ಷ್ಯ ಕೊಟ್ಟ ಯಡಿಯೂರಪ್ಪ; ಸಿದ್ದರಾಮಯ್ಯ ವ್ಯಂಗ್ಯ

ಡಿವಿಜಿ ಸುದ್ದಿ, ಬೆಂಗಳೂರು: ಮುಖ್ಯಮಂತ್ರಿ  ಯಡಿಯೂರಪ್ಪ ಅವರು ತಮ್ಮ ಸರ್ಕಾರದ ನೂರು ದಿನ ಸಂಭ್ರಮದಲ್ಲಿ ಅದ್ಭುತ ವಿಡಿಯೋ ಮೂಲಕ  ಆಪರೇಷನ್ ಕಮಲಕ್ಕೆ ಸಾಕ್ಷ್ಯ ಒದಗಿಸಿದ್ದಾರೆ. ಅವರಿಗೆ ರಾಜ್ಯದ ಜನ ಪರವಾಗಿ ಕೃತಜ್ಞತೆ ಸಲ್ಲಿಸಬೇಕು ಎಂದು ಸರಣಿ ಟ್ವಿಟ್ ಮೂಲಕ ವಿಪಕ್ಷ ನಾಯಕ ಸಿದ್ದರಾಮಯ್ಯ ವ್ಯಂಗ್ಯವಾಡಿದ್ದಾರೆ.

ಈ ವಿಡಿಯೋ ಮೂಲಕ ಅನರ್ಹ ಶಾಸಕರ ಬೆಂಬಲಕ್ಕೆ ಕೇಂದ್ರ ಸಚಿವ ಅಮಿತ್ ಶಾ ಇದ್ದಾರೆ.   ಎಂಬ ಸತ್ಯವನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಒಪ್ಪಿಕೊಂಡಿದ್ದರೆ. ಅಪರೇಷನ್ ಕಲಮದ ಬಗ್ಗೆ ರಾಜ್ಯಪಾಲರು ಮತ್ತು ರಾಷ್ಟ್ರಪತಿಗಳಿಗೆ ದೂರು ನೀಡುವುದಾಗಿಯೂ ತಿಳಿಸಿದ್ದಾರೆ.

ಅನರ್ಹ ಶಾಸಕರಿಗೂ ನಮಗೂ ಸಂಬಂಧವಿಲ್ಲ ಎನ್ನುತ್ತಿದ್ದ ಯಡಿಯೂರಪ್ಪ, ಈಗ ಆಪರೇಷನ್ ಕಮಲ, ಅಮಿತ್ ಶಾ ನಿರ್ದೇಶನದಲ್ಲಿಯೇ ನಡೆದಿತ್ತು ಎಂಬ ಸತ್ಯವನ್ನು ವೀಡಿಯೋದಲ್ಲಿ ಹೇಳಿದ್ದಾರೆ. ಇಂತಹವರಿಗೆ ಅಧಿಕಾರದಲ್ಲಿ ಮುಂದುವರಿಯುವ ನೈತಿಕತೆ ಇದೆಯೇ ಎಂದು ಪ್ರಶ್ನೆ ಮಾಡಿದ್ದಾರೆ.

ನಮ್ಮ‌ ಪಕ್ಷದ ಶಾಸಕರಿಗೆ ಆಮಿಷ ತೋರಿಸಿ  ಮುಂಬೈನ ಹೊಟೇಲ್‌ನಲ್ಲಿಟ್ಟು ಸರ್ಕಾರದ ಪತನಕ್ಕೆ ನೇರ ಕಾರಣರಾಗಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದ್ದಾರೆ.

ಈ ಪ್ರಕರಣದಲ್ಲಿ  ಮುಖ್ಯಮಂತ್ರಿಗಳು  ಹಾಗೂ ಕೇಂದ್ರ ಸಚಿವರು ನೇರವಾಗಿ ಭಾಗಿಯಾಗಿದ್ದಾರೆ.  ಇದನ್ನು ಸುಪ್ರೀಂ ಕೋರ್ಟ್‌ ಗಮನಕ್ಕೆ ತಂದು ನ್ಯಾಯ ಕೇಳ್ತೇವೆ.  ರಾಜ್ಯಪಾಲರನ್ನು ಭೇಟಿಮಾಡಿ, ಯಡಿಯೂರಪ್ಪನವರ ರಾಜೀನಾಮೆ ಪಡೆಯುವಂತೆ ಮನವಿ ಸಲ್ಲಿಸಲಿದ್ದೇವೆ . ಇದಲ್ಲದೆ ರಾಷ್ಟ್ರಪತಿ ಅವರನ್ನೂ  ಭೇಟಿ ಮಾಡಿ,ಕೇಂದ್ರ ಸರ್ಕಾರದ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಮನವಿ ಮಾಡುತ್ತೇವೆ  ಎಂದಿದ್ದಾರೆ.

Click to comment

Leave a Reply

Your email address will not be published. Required fields are marked *

More in ರಾಜಕೀಯ

Advertisement Enter ad code here
Advertisement

ದಾವಣಗೆರೆ

Advertisement

ಪ್ರಮುಖ ಸುದ್ದಿ

Advertisement
Advertisement e
Advertisement
To Top