ಡಿವಿಜಿ ಸುದ್ದಿ, ತುಮಕೂರು: ನಾನು ಇನ್ಮುಂದೆ ಉಪಮುಖ್ಯಮಂತ್ರಿ ಹುದ್ದೆ ಕೇಳುವುದಕ್ಕೆ ಹೋಗುವುದಿಲ್ಲ. ಈ ವಿಚಾರವಾಗಿ ಪಕ್ಷಕ್ಕೆ ಮುಜುಗರ ತರುವುದಿಲ್ಲ ಎಂದು ಆರೋಗ್ಯ ಸಚಿವ ಬಿ.ಶ್ರೀರಾಮುಲು ಹೇಳಿದರು
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಯಡಿಯೂರಪ್ಪ ಅವರು ಯಾವ ನಿರ್ಧಾರವನ್ನು ಕೈಗೊಳ್ಳುತ್ತಾರೋ ಅದಕ್ಕೆ ನಾನು ಬದ್ಧನಾಗಿದ್ದೇನೆ. ಪಕ್ಷದ ತತ್ವ, ಸಿದ್ಧಾಂತದ ಮೇಲೆ ರಾಜಕಾರಣ ಮಾಡಬೇಕಾಗುತ್ತದೆ. ನನಗೆ ಡಿಸಿಎಂ ಹುದ್ದೆ ಬೇಕು ಎನ್ನುವುದರಿಂದ ಪಕ್ಷಕ್ಕೆ ಮುಜುಗರ ಆಗುತ್ತದೆ. ಈ ವಿಚಾರದಲ್ಲಿ ಯಾರ ಮೇಲೂ ಒತ್ತಡ ತರಲು ಎಂದು ಸ್ಪಷ್ಟಪಡಿಸಿದರು.
ಮುಖ್ಯಮಂತ್ರಿ ಯಡಿಯೂರಪ್ಪ, ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಹಾಗೂ ಅಮಿತ್ ಶಾ ಅವರು ಸಚಿವ ಸಂಪುಟ ವಿಸ್ತರಣೆಯ ಬಗ್ಗೆ ಚರ್ಚಿಸಿದ್ದಾರೆ. ನಾಳೆ ಸಂಪುಟ ವಿಸ್ತರಣೆ ಆಗಲಿದ್ದು, ಎಲ್ಲ ಶಾಸಕರು ಒಗ್ಗಟ್ಟಿನಿಂದ ಇದ್ದೇವೆ. ಪಕ್ಷದ ತೀರ್ಮಾನಕ್ಕೆ ಎಲ್ಲರು ಬದ್ಧವಾಗಿದ್ದೇವೆ ಎಂದರು.



