Connect with us

Dvgsuddi Kannada | online news portal | Kannada news online

ಕಾಂಗ್ರೆಸ್ ಪಕ್ಷಕ್ಕೆ ದೇಶದಲ್ಲಿ ಭವಿಷ್ಯ ಇಲ್ಲ: ಡಾ.ಕೆ. ಸುಧಾಕರ್

ಪ್ರಮುಖ ಸುದ್ದಿ

ಕಾಂಗ್ರೆಸ್ ಪಕ್ಷಕ್ಕೆ ದೇಶದಲ್ಲಿ ಭವಿಷ್ಯ ಇಲ್ಲ: ಡಾ.ಕೆ. ಸುಧಾಕರ್

ಡಿವಿಜಿ ಸುದ್ದಿ, ಚಿಕ್ಕಬಳ್ಳಾಪುರ: ಕಾಂಗ್ರೆಸ್ ಪಕ್ಷ ಇಡೀ ದೇಶದಲ್ಲಿ ಮುಳುಗುತ್ತಿರುವ ಹಡಗು. ಆ ಪಕ್ಷಕ್ಕೆ ದೇಶದಲ್ಲಿ ಭವಿಷ್ಯ ಇಲ್ಲ ಎಂದು ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರದ ಶಾಸಕ ಡಾ ಕೆ ಸುಧಾಕರ್ ಹೇಳಿದರು.

ಚಿಕ್ಕಬಳ್ಳಾಪುರ ನಗರದಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷ ಮುಳುಗಿ ಹೋಗುವಂತಹ ಹಡುಗು, ಹೀಗಾಗಿ ನಾನು ಕಾಂಗ್ರೆಸ್ ಪಕ್ಷ ಬಿಟ್ಟು ಬಿಜೆಪಿ ಸೇರಿದ್ದೇನೆ. ಕಾಂಗ್ರೆಸ್ ಪಕ್ಷಕ್ಕೆ ಇಡೀ ದೇಶದಲ್ಲಿ ಭವಿಷ್ಯವಿಲ್ಲ. ದೇಶವನ್ನ ಕಟ್ಟುವ ಸಾಮರ್ಥ್ಯ ಇರೋದು ಕೇವಲ ಬಿಜೆಪಿ ಪಕ್ಷಕ್ಕೆ ಮಾತ್ರ ೆಂದರು.

ದೇಶದ ಮೇಲೆ ವಿಶೇಷ ಪ್ರೀತಿ ಹಾಗೂ ಗೌರವ ಇರುವ ಪಕ್ಷ, ಬಿಜೆಪಿ. ಹೀಗಾಗಿ ಮುಂದಿನ 25-30 ವರ್ಷಗಳ ದೇಶದ ಅಭಿವೃದ್ಧಿ ಹಾಗೂ ರಾಜಕೀಯ ದೂರದೃಷ್ಟಿ ಇಟ್ಟುಕೊಂಡು ಬಿಜೆಪಿ ಸೇರಿದ್ದೇನೆ. ಮುಖ್ಯಮಂತ್ರಿ ಬಿಎಸ್‍ವೈ ಮಾತಿನ ಮೇಲೆ ನನಗೆ ನಂಬಿಕೆ ಇದೆ. ಅದಷ್ಟು ಬೇಗ ಸಚಿವ ಸಂಪುಟ ವಿಸ್ತರಣೆ ಆಗಲಿದೆ ಎಂದರು.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

To Top