ಡಿವಿಜಿ ಸುದ್ದಿ, ಮೈಸೂರು: ಉಪ ಚುನಾವಣೆಯಲ್ಲಿ ಹುಣಸೂರು ವಿಧಾನಸಭಾ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿ ಸೋತಿದ್ದ ಮಾಜಿ ಸಚಿವ ಎಚ್. ವಿಶ್ವನಾಥ್ , ತಾವು ಕೂಡ ಸಚಿವ ಸ್ಥಾನದ ಆಕಾಂಕ್ಷಿ ಎಂಬುದನ್ನು ಪರೋಕ್ಷವಾಗಿ ಹೇಳಿಕೊಂಡಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ತಮ್ಮ ಅನರ್ಹತೆ ವಿಚಾರವಾಗಿ ಸುಪ್ರೀಂ ಕೋರ್ಟ್ ನೀಡಿರುವ ತೀರ್ಪಿನಲ್ಲಿ ಸೋತ ಶಾಸಕರು ಸಚಿವರಾಗಬಾರದು ಎಂದು ಎಲ್ಲಿಯೂ ಹೇಳಿಲ್ಲ ಎನ್ನುವ ಮೂಲಕ ಸಚಿವ ಸ್ಥಾನದ ಅಕಾಂಕ್ಷಿ ಎಂಬುದನ್ನು ಪರೋಕ್ಷವಾಗಿ ಹೇಳಿಕೊಂಡಿದ್ದಾರೆ.
ಜನವಿರೋಧಿ ಮೈತ್ರಿ ಸರ್ಕಾರದ ಕೈಯಲ್ಲಿ ಪ್ರಜಾಪ್ರಭುತ್ವ ಸಿಲುಕಿತ್ತು. ಹೀಗಾಗಿ 17 ಶಾಸಕರು ರಾಜೀನಾಮೆ ನೀಡುವ ಮೂಲಕ ಪ್ರಜಾಪ್ರಭುತ್ವವನ್ನು ಸ್ವತಂತ್ರಗೊಳಿಸಿದ್ದೇವೆ. ಯಾವುದೇ ಹುದ್ದೆಯ ಆಸೆಯಿಂದಲ್ಲ. ಸಚಿವ ಸ್ಥಾನ ನೀಡುವುದು ಬಿಜೆಪಿ ಹೈಕಮಾಂಡ್ ಹಾಗೂ ಯಡಿಯೂರಪ್ಪ ಅವರಿಗೆ ಬಿಟ್ಟ ವಿಚಾರ ಎಂದರು



