ಡಿವಿಜಿ ಸುದ್ದಿ,ಬೆಳಗಾವಿ: ಬಿಜೆಪಿಯ ಹುಬ್ಬಳಿ ಸಭೆಯ ವೈರಲ್ ಆಡಿಯೋದಲ್ಲಿ ಮಾತನಾಡಿದ್ದು ತಾವೇ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಮೊದಲು ಒಪ್ಪಿಕೊಂಡಿದ್ದರು. ಆ ನಂತರ, ದೆಹಲಿಯ ನಾಯಕರು ಬೈದ ಮೇಲೆ ಉಲ್ಟಾ ಹೊಡೆದಿದ್ದಾರೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ವ್ಯಂಗ್ಯವಾಡಿದರು.
ಇಲ್ಲಿನ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಸೋಮವಾರ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಬಿಜೆಪಿ ಸಭೆಯಲ್ಲಿ ಬಿಎಸ್‌ವೈ ಸತ್ಯವನ್ನೇ ಹೇಳಿದ್ದಾರೆ. ಅನರ್ಹ ಶಾಸಕರನ್ನು ಹೋಟೆಲ್‌ನಲ್ಲಿ ಇರಿಸಿದ್ದು, ಅಮಿತ್ ಷಾ ನಿರ್ದೇಶನ ಮೇರೆಗೆ ಎಂದು ಒಪ್ಪಿಕೊಂಡಿದ್ದಾರ ಎಂದರು
ಈ ವಿಡಿಯೊವನ್ನು ಡಿಸಿಎಂ ಲಕ್ಷ್ಮಣ ಸವದಿ, ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ನಳಿನ್‌ಕುಮಾರ್ ಕಟೀಲ್ ಅಥವಾ ಗೃಹ ಸಚಿವ ಬಸವರಾಜ ಬೊಮ್ಮಾಯಿ ಮಾಧ್ಯಮಗಳಿಗೆ ಬಿಡುಗಡೆ ಮಾಡಿರಬಹುದು ಎಂದರು .
40 ವರ್ಷಗಳ ನನ್ನ ರಾಜಕೀಯದಲ್ಲಿ ಯಾವತ್ತೂ ಡರ್ಟಿ ಪಾಲಿಟಿಕ್ಸ್ ಮಾಡಿಲ್ಲ. ಸಂಸದೆ ಶೋಭಾ ಕರಂದ್ಲಾಜೆ ಅವರೇ ಡರ್ಟಿ ಪಾಲಿಟಿಕ್ಸ್ ಮಾಡುತ್ತಿದ್ದಾರೆ ಎಂದು ಕಿಡಿಕಾರಿದರು.



