ಕರಾಚಿ: ಪಾಕಿಸ್ತಾನದ ಹಿರಿಯ ಕ್ರಿಕೆಟಿಗ ಶಾಹಿದ್ ಆಫ್ರಿದಿಗೆ ಕೊರೊನಾ ಪಾಸಿಟಿವ್ ಪತ್ತೆಯಾಗಿದೆ. ಈ ವಿಷಯವನ್ನು ಅವರೇ ಹೇಳಿಕೊಂಡಿದ್ದು, ಕೊರೊನಾ ಸೋಂಕಿಗೆ ಒಳಗಾದ ಮೊದಲ ಕ್ರಿಕೆಟಿಗ ಎನಿಸಿಕೊಂಡಿದ್ದಾರೆ.
ಅನಾರೋಗ್ಯ ಕಾಣಿಸಿಕೊಂಡ ಹಿನ್ನೆಲೆ ಪಾಸಣೆಗೆ ಒಳಗಾಗಿದ್ದೆ. ತಪಾಸಣೆಯಲ್ಲಿ ಕೋವಿಡ್ ಇರುವುದು ಪತ್ತೆಯಾಗಿದೆ. ಶೀಘ್ರವೇ ಗುಣಮುಖನಾಗಿ ಬರುತ್ತೇನೆ ಎಂದು ಆಫ್ರಿದಿ ಟ್ವೀಟ್ ಮಾಡಿದ್ದಾರೆ. ಆಫ್ರಿದಿ ಪಾಕಿಸ್ತಾನ ಪರ 27 ಟೆಸ್ಟ್, 398 ಏಕದಿನ ಹಾಗೂ 99 ಟ್ವೆಂಟಿ–20 ಪಂದ್ಯ ಆಡಿದ್ದಾರೆ..



