ಡಿವಿಜಿ ಸುದ್ದಿ, ದಾವಣಗೆರೆ: ತಾಲ್ಲೂಕಿನ ಕಮರ್ಷಿಯಲ್ ಫೀಡರ್‍ನ ವ್ಯಾಪ್ತಿಯಲ್ಲಿ ದಾವಣಗೆರೆ ಸ್ಮಾರ್ಟ್ ಸಿಟಿಯ ಕಾಮಗಾರಿ ಕೆಲಸಗಳಿರುವುದರಿಂದ ನಾಳೆ(ಡಿ.25) ರಂದು ಬೆಳಿಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ಕಮರ್ಷಿಯಲ್ ಫೀಡರ್ ವ್ಯಾಪ್ತಿಯಲ್ಲಿ ವಿದ್ಯುತ್ ವ್ಯತ್ಯವಾಗಲಿದೆ.
ಹಗೆದಿಬ್ಬ ಸರ್ಕಲ್, ಗಾಂಧಿನಗರ ಅಂಬೇಡ್ಕರ್ ಸರ್ಕಲ್, ಮಹಾರಾಜ ಪೇಟೆ, ಬಸವರಾಜ ಪೇಟೆ, ಚೌಕಿಪೇಟೆ, ವಿಜಯಲಕ್ಷ್ಮೀ ರಸ್ತೆ, ದೊಡ್ಡಪೇಟೆ, ಕಾಳಿಕಾದೇವಿ ರಸ್ತೆ, ಎಸ್‍ಕೆಪಿ ರಸ್ತೆ, ಹಳೇಪೇಟೆ ಶ್ರೀ ವೀರಭದ್ರೇಶ್ವರ ದೇವಸ್ಥಾನದ ಸುತ್ತಮುತ್ತ ಹಾಗೂ ಇತರೆ ಪ್ರದೇಶಗಳಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ ಪ್ರಕಟಣೆ ತಿಳಿಸಿದೆ.