ಡಿವಿಜಿಸುದ್ದಿ.ಕಾಂ, ದಾವಣಗೆರೆ: ಮಾಜಿ ಡಿಸಿಎಂ ಪರಮೇಶ್ವರ್ ಆಪ್ತ ಸಹಾಯಕ ರಮೇಶ್ ಸಾವು ಸಹಜ ಸಾವಲ್ಲ. ಈ ಸಾವಿಗೆ ಬೇರೆ ಬೇರೆ ಕಾರಣಗಳಿವೆ ಎಂದು ಮುಖ್ಯಮಂತ್ರಿ ರಾಜಕೀಯ ಕಾರ್ಯದರ್ಶಿ ರೇಣುಕಾಚಾರ್ಯ ಹೇಳಿದರು.
ದಾವಣಗೆರೆಯಲ್ಲಿ ಸುದ್ದಿಗಾರೊಂದಿಗೆ ಮಾತನಾಡಿದ ಅವರು, ಆಪ್ತ ಸಹಾಯಕ ರಮೇಶ ಸಾವು ಸಹಜ ಸಾವು ಅಲ್ಲ, ಆತನ್ನನ್ನ ಮುಗಿಸಲಾಗಿದೆ. ಇದಕ್ಕೆ ಬೇರೆ ಬೇರೆ ಕಾರಣಗಳು ಇವೆ. ಮಾಜಿ ಡಿಸಿಎಂ ಡಾ.ಜಿ.ಪರಮೇಶ್ವರ ಅವರೇ ಅದಕ್ಕೆ ಉತ್ತರಿಸಬೇಕು ಎಂದರು.
ಸಾವಿಗೆ ಐಟಿ ಅಥವಾ ಕೇಂದ್ರ ಸರ್ಕಾರ ಕಾರಣ ಅಲ್ಲ. ಪರಮೇಶ್ವರ ಅವರು ಬೆಂಗಳೂರಿನಲ್ಲಿಯೇ ಇದ್ದರು. ಅಧಿವೇಶನದಲ್ಲಿ ಯಾಕೆ ಭಾಗವಹಿಸಲಿಲ್ಲ. ಸದನದಲ್ಲಿ ಈ ಬಗ್ಗೆ ಮಾತಾಡಬಹುದಿತ್ತು.ರಮೇಶ ಸಾವಿನ ಬಗ್ಗೆ ನಾನಾ ಸಂಶಗಳಿವೆ. ಇದು ತನಿಖೆಯಿಂದ ಬೆಳಕಿಗೆ ಬರಲಿದೆ ಎಂದು ಹೇಳಿದರು.



