ಡಿವಿಜಿ ಸುದ್ದಿ, ದಾವಣಗೆರೆ: 2020-21ನೇ ಶೈಕ್ಷಣಿಕ ಸಾಲಿನಲ್ಲಿ ರಾಜ್ಯದಲ್ಲಿ ಹೊಸ ಖಾಸಗಿ ಶಾಶ್ವತ ಅನುದಾನ ರಹಿತ ಪದವಿ ಪೂರ್ವ ಕಾಲೇಜು ಪ್ರಾರಂಭಿಸಲು ಅರ್ಹ ಖಾಸಗಿ ಶಿಕ್ಷಣ ಸಂಸ್ಥೆ ಹಾಗೂ ಟ್ರಸ್ಟ್‍ಗಳು ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.
ಅರ್ಜಿ ಸಲ್ಲಿಸಲು ಬಯಸುವ ಅರ್ಹ ಖಾಸಗಿ ಶಿಕ್ಷಣ ಸಂಸ್ಥೆ ಹಾಗೂ ಟ್ರಸ್ಟ್‍ಗಳು ಆನ್‍ಲೈನ್ ಮೂಲಕ ಪಡೆದು ಜಂಟಿ ನಿರ್ದೇಶಕರು, ಪದವಿ ಪೂರ್ವ ಶಿಕ್ಷಣ ನಿರ್ದೇಶನಾಲಯ, ಬೆಂಗಳೂರು ಇವರಿಗೆ ಸಲ್ಲಿಸಬೇಕು. ಅರ್ಜಿ ನಮೂನೆ ಮತ್ತು ಹೆಚ್ಚಿನ ವಿವರಗಳನ್ನು ಇಲಾಖೆಯ ವೆಬ್‍ಸೈಟ್: www.pue.kar.nic.in ಲಾಗಿನ್ ಆಗಿ ಪಡೆಯಬಹುದಾಗಿದೆ.
2020-21 ನೇ ಸಾಲಿನಲ್ಲಿ ಪದವಿ ಪೂರ್ವ ಕಾಲೇಜನ್ನು ಪ್ರಾರಂಭಿಸಲು ಆನ್‍ಲೈನ್ ಮೂಲಕ ಈಗಾಗಲೇ (2018-19 ಮತ್ತು 2019-20) ಹೊಸ ಖಾಸಗಿ ಶಾಶ್ವತ ಅನುದಾನ ರಹಿತ ಪದವಿ ಪೂರ್ವ ಕಾಲೇಜು ಮಂಜೂರು ಕೋರಿ ಅರ್ಜಿ ಸಲ್ಲಿಸಿರುವ ಖಾಸಗಿ ಶಿಕ್ಷಣ ಸಂಸ್ಥೆ ಮತ್ತು ಟ್ರಸ್ಟ್‍ಗಳು ಮತ್ತೊಮ್ಮೆ ಅರ್ಜಿ ಸಲ್ಲಿಸುವ ಅಗತ್ಯವಿರುವುದಿಲ್ಲ.



