ಡಿವಿಜಿ ಸುದ್ದಿ, ಬೆಂಗಳೂರು: ಜುಲೈ 8ರಂದು ಪಿಯುಸಿ ಉಪನ್ಯಾಸಕರ ನೇಮಕಾತಿ ಆನ್ ಲೈನ್ ಕೌನ್ಸಿಲಿಂಗ್ ನಡೆಸಲು ಸಚಿವ ಸುರೇಶ್ಕುಮಾರ್ ಸೂಚನೆ ನೀಡಿದ್ದಾರೆ.
ಈ ಕುರಿತು ಪದವಿಪೂರ್ವ ಶಿಕ್ಷಣ ಮಂಡಳಿಯ ನಿರ್ದೇಶಕರಿಗೆ ಪತ್ರ ಬರೆದಿದ್ದಾರೆ. ಕೊರೊನಾ ವೈರಸ್ ಹಿನ್ನೆಲೆ ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು ಅತಿ ಮುಖ್ಯವಾದ ಹಿನ್ನೆಲೆ ಆನ್ ಲೈನ್ ಮೂಲಕ ಕೌನ್ಸಿಲಿಂಗ್ ನಡೆಸಿ ನೇಮಕಾತಿ ಆದೇಶ ನೀಡುವಂತೆ ಸೂಚನೆ ನೀಡಿದ್ದಾರೆ.




