ಡಿವಿಜಿ ಸುದ್ದಿ, ಬೆಂಗಳೂರು: ಕನ್ನಡದ ರಿಯಾಲಿಟಿ ಶೋ ಪ್ಯಾಟೆ ಹುಡುಗಿ ಹಳ್ಳಿ ಲೈಫ್ ಖ್ಯಾತಿಯ ಮೆಬೀನಾ ಮೈಕಲ್ ಮಂಡ್ಯ ಬಳಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ದುರ್ಮರಣ ಹೊಂದಿದ್ದಾರೆ.

ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ದೇವಿಹಳ್ಳಿ ಬಳಿ ಹಾದು ಹೋದ ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಈ ಅಪಘಾತ ಸಂಭವಿಸಿದೆ. ಮೆಬೀನಾ ಬೆಂಗಳೂರಿನಿಂದ ಸೋಮವಾರ ಪೇಟೆಯತ್ತ ಕಾರಿನಲ್ಲಿ ತೆರಳುತ್ತಿದ್ದರು. ದೇವಿಹಳ್ಳಿ ಬಳಿ ಇರುವ ತಿರುವಿನಲ್ಲಿ ಕಾರು ಟ್ರ್ಯಾಕ್ಟರ್ಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಮೆಬೀನಾ ತೀವ್ರ ಗಾಯಗೊಂಡು ಮೃತಪಟ್ಟಿದ್ದಾರೆ.
ಪ್ಯಾಟೆ ಹುಡ್ಗೀರು ಹಳ್ಳಿ ಲೈಫು ರಿಯಾಲಿಟಿ ಶೋ 4ರ ವಿನ್ನರ್ ಆಗಿ 7 ಲಕ್ಷ ರೂ. ಬಹುಮಾನ ಪಡೆದಿದ್ದರು. ಮಾಡೆಲ್ ಆಗಿದ್ದ ಮೆಬಿನಾ ಸಾಕಷ್ಟು ಖ್ಯಾತಿ ಪಡೆದಿದ್ದರು.



