ಡಿವಿಜಿ ಸುದ್ದಿ, ರಾಯಚೂರು: ಜಿಲ್ಲಾ ಪೊಲೀಸ್ ಹಾಗೂ ಅಬಕಾರಿ ಇಲಾಖೆ ಜಂಟಿಯಾಗಿ ಕಾರ್ಯಾಚರಣೆ ನಡೆಸಿ ಸಾವಿರಾರು ಲೀಟರ್ ಕಳ್ಳಭಟ್ಟಿಗೆ ಬಳಸುವ ಬೆಲ್ಲದ ಕೊಳೆ ಜಪ್ತಿ ಮಾಡಿದ್ದಾರೆ.
ರಾಯಚೂರು ಜಿಲ್ಲೆ ಲಿಂಗಸುಗೂರು ತಾಲೂಕಿನ ಜಕ್ಕೆರುಮಡು ತಾಂಡದಲ್ಲಿ ದಾಳಿ ನಡೆಸಿ ಕಾಳಪ್ಪ, ಪೊನ್ನಪ್ಪ ರಾಥೋಡ್ ಇಬ್ಬರು ಆರೋಪಿಗಳನ್ನು ವಶಕ್ಕೆ ಪಡೆಯಲಾಗಿದೆ. ಕಳ್ಳಭಟ್ಟಿ ತಯಾರಿಕೆಯಲ್ಲಿ ತೊಡಗಿದ್ದ ತಾಂಡಾ ನಿವಾಸಿಗಳು ಓಡಿ ಹೋಗಿ ತಪ್ಪಿಸಿಕೊಂಡಿದ್ದಾರೆ.
ದಾಳಿ ಸಂದರ್ಭದಲ್ಲಿ ಪೊಲೀಸ್ ವಿರುದ್ಧ ತಾಂಡಾ ನಿವಾಸಿಗಳು ಗಲಾಟೆ ಮಾಡಿದ್ದಾರೆ. ದಾಳಿ ಬಳಿಕ ಅಧಿಕಾರಿಗಳು ಕಳ್ಳಭಟ್ಟಿ ಕೊಳೆ ಹಾಗೂ ಕೊಡಗಳನ್ನು ನೆಲದಲ್ಲಿ ಹೂತು ಹಾಕಿದ್ದಾರೆ. ಮುದಗಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ದಾಳಿ ನಡೆದಿದ್ದು ಪ್ರಕರಣ ದಾಖಲಿಸಲಾಗಿದೆ. ಲಾಕ್‍ಡೌನ್ ಹಿನ್ನೆಲೆ ಮದ್ಯ ಮಾರಾಟ ನಿಷೇಧವಾಗಿರುವುದರಿಂದ ಅಕ್ರಮ ಮದ್ಯಕ್ಕೆ ಭಾರೀ ಬೇಡಿಕೆ ಬಂದಿದೆ.



