Connect with us

Dvgsuddi Kannada | online news portal | Kannada news online

ರೈಲ್ವೆ ಹಳಿ ಮೇಲೆ ಮಲಗಿದ್ದ 14 ಮಂದಿ ಸಾವು

ಪ್ರಮುಖ ಸುದ್ದಿ

ರೈಲ್ವೆ ಹಳಿ ಮೇಲೆ ಮಲಗಿದ್ದ 14 ಮಂದಿ ಸಾವು

ಮುಂಬೈ: ಹಳಿ ಮೇಲೆ ಮಲಗಿದ್ದ 14 ಮಂದಿ ಕೂಲಿ ಕಾರ್ಮಿಕರ ಮೇಲೆ ರೈಲು ಹರಿದ  ಘಟನೆ ಮಹಾರಾಷ್ಟ್ರದ ಔರಂಗಾಬಾದ್‍ನಲ್ಲಿ ಇಂದು ಬೆಳಗ್ಗೆ ನಡೆದಿದೆ.

ಮಕ್ಕಳು, ಮಹಿಳೆಯರು ಸೇರಿದಂತೆ 15 ಜನ ವಲಸೆ ಕಾರ್ಮಿಕರು ಔರಂಗಾಬಾದ್-ಜಲ್ನಾ ರೈಲ್ವೆ ಟ್ರ್ಯಾಕ್ ಮೇಲೆ ಮಲಗಿದ್ದರು. ನಸುಕಿನ ಜಾವ 4 ಗಂಟೆಗೆ ಬಂದ ಗೂಡ್ಸ್ ರೈಲು ಕಾರ್ಮಿಕರ ಮೇಲೆ ಹರಿದಿದೆ. ಪರಿಣಾಮ ಮಕ್ಕಳು, ಕಾರ್ಮಿಕರ ದೇಹ ತುಂಡು ತುಂಡಾಗಿ ಟ್ರ್ಯಾಕ್ ಮೇಲೆ ಬಿದ್ದಿವೆ.

ಕರ್ಮದ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಅಪಘಾತ ಸಂಭವಿಸಿದ್ದು, ಪೊಲೀಸರು ಬೆಳಗ್ಗೆ 6 ಗಂಟೆ ಸುಮಾರಿಗೆ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತರ ದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಸಮೀಪದ ಆಸ್ಪತ್ರೆಗೆ ಸಾಗಿಸಲಾಗಿದೆ.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

ದಾವಣಗೆರೆ

Advertisement
Advertisement Enter ad code here

Title

To Top