ಡಿವಿಜಿ ಸುದ್ದಿ, ಬೆಂಗಳೂರು: ರಾಜ್ಯದ ಕರಾವಳಿ ಹಾಗೂ ದಕ್ಷಿಣ ಒಳನಾಡು ಸೇರಿ 10 ಜಿಲ್ಲೆಗಳಲ್ಲಿ ಇಂದು, ನಾಳೆ ಗುಡುಗು, ಸಿಡಿಲು ಸಹಿತ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬಳ್ಳಾರಿ. ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಯೆಲ್ಲೊ ಅಲರ್ಟ್ ಘೋಷಿಸಲಾಗಿದೆ.
ಬಿಸಿಗಾಳಿ: ಬಾಗಲಕೋಟೆ, ಬೀದರ್, ಕಲಬುರ್ಗಿ, ವಿಜಯಪುರ ಹಾಗೂ ಯಾದಗಿರಿ ಜಿಲ್ಲೆಗಳಲ್ಲಿ ಮುಂದಿನ 48 ಗಂಟೆಗಳವರೆಗೆ ಬಿಸಿಗಾಳಿ ಬೀಸಲಿದ್ದು, ಸಾರ್ವಜನಿಕರು ಬಿಸಿಗಾಳಿಗೆ ಮೈಯೊಡ್ಡದಂತೆ ಎಚ್ಚರಿಕೆ ನೀಡಲಾಗಿದೆ. ಕಲಬುರ್ಗಿಯಲ್ಲಿ ಮಂಗಳವಾರ 44.7 ಡಿಗ್ರಿ ಗರಿಷ್ಠ ತಾಪಮಾನ, ಮಡಿಕೇರಿಯಲ್ಲಿ 28 ಡಿಗ್ರಿ ಸೆಲ್ಸಿಯಸ್ ಕನಿಷ್ಠ ತಾಪಮಾನ ದಾಖಲಾಗಿದೆ.



