ಡಿವಿಜಿ ಸುದ್ದಿ, ಬೆಂಗಳೂರು: ನೈರುತ್ಯ ಮುಂಗಾರು ಕೇರಳ ರಾಜ್ಯಕ್ಕೆ ಜೂನ್ 5 ರಂದು ಮುಂಗಾರು ಮಳೆ ಪ್ರವೇಶ ಪಡೆಯಲಿದ್ದು, ಅದೇ ದಿನ ರಾಜ್ಯಕ್ಕೂ ಮುಂಗಾರು ಪ್ರವೇಶಿಸಲಿದೆ. ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತ ಸಂಭವಿಸಿರುವುದರಿಂದ ಇಂದು, ನಾಳೆ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕರಾವಳಿ ಭಾಗದಲ್ಲಿ ಗಂಟೆಗೆ 40 ರಿಂದ 60 ಕಿ.ಮೀ ವೇಗದಲ್ಲಿ ಗಾಳಿ ಬೀಸಲಿದ್ದು, ಮೀನುಗಾರರಿಗೆ ಮುನ್ನೆಚ್ಚರಿಕೆ ನೀಡಲಾಗಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಹಾಸನ, ಕೊಡಗು, ಮೈಸೂರು, ಚಾಮರಾಜನಗರ,ಶಿವಮೊಗ್ಗದಲ್ಲಿ ಭಾರೀ ಮಳೆಯಾಗಲಿದ್ದು ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ. ಇನ್ನು ಬೆಳಗಾವಿ,ಧಾರವಾಡ, ಹಾವೇರಿ, ಕಲಬುರಗಿ, ವಿಜಯಪುರದಲ್ಲಿ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.