ಡಿವಿಜಿ ಸುದ್ದಿ, ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಪೂರ್ವ ಮಳೆ ಪ್ರವೇಶಿಸಿದ್ದು, ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ಇಂದು ಗುಡುಗು, ಸಿಡಿಲು ಸಹಿತ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಕರಾವಳಿ ಭಾಗದ ದಕ್ಷಿಣ ಕನ್ನಡ, ಉಡುಪಿ ಹಾಗೂ ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ ಜಿಲ್ಲೆಗಳಲ್ಲಿ ಬುಧವಾರ ಯೆಲ್ಲೊ ಅಲರ್ಟ್ ಘೋಷಿಸಿದೆ.
ವಾಯುಭಾರ ಕುಸಿತದಿಂದ ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾನುವಾರದಿಂದ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಬಿರುಗಾಳಿ ಹಾಗೂ ಆಲಿಕಲ್ಲು ಸಹಿತ ಮಳೆಯಾಯಿತು. ಮೇ ಅಂತ್ಯದವರೆಗೆ ಮುಂಗಾರು ಪೂರ್ವ ಮಳೆ ಮುಂದುವರಿಯುವ ಸಾಧ್ಯತೆ ಇದೆ ಎಂದು ತಿಳಿಸಿದೆ.



