ಡಿವಿಜಿ ಸುದ್ದಿ, ಬೆಂಗಳೂರು: ಇಂದಿನಿಂದ ಮೂರು ದಿನ ಉತ್ತರ ಕರ್ನಾಟಕ ಭಾಗದಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಆ.11 ರಂದು ಎಲ್ಲ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ಕರಾವಳಿ ಪ್ರದೇಶದಲ್ಲಿ ಆ. 11 ವರಗೆ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಹೀಗಾಗಿ ಉತ್ತರ ಕನ್ನಡ, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ಆ.8, 10 ವರೆಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಆ. 11 ರಂದು ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಇನ್ನು ಮಲೆನಾಡಿನ ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು ಭಾಗದಲ್ಲಿ ಕೂಡ ಆ.11 ವರೆಗೆ ಭಾರೀ ಮಳೆ ಸುರಿಯಲಿದ್ದು, ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ. ದಕ್ಷಿಣ ಒಳನಾಡಿನ ಬೆಂಗಳೂರು ಸುತ್ತಮುತ್ತ ಆ.11 ವರೆಗೆ ಮಳೆಯಾಗಲಿದೆ.



