Connect with us

Dvgsuddi Kannada | online news portal | Kannada news online

ಮಳೆಯ ಅಬ್ಬರ : ತುರ್ತಾಗಿ 50 ಕೋಟಿ ಬಿಡುಗಡೆ ಮಾಡುವಂತೆ ಸಿಎಂ ಯಡಿಯೂರಪ್ಪ ಸೂಚನೆ

ಪ್ರಮುಖ ಸುದ್ದಿ

ಮಳೆಯ ಅಬ್ಬರ : ತುರ್ತಾಗಿ 50 ಕೋಟಿ ಬಿಡುಗಡೆ ಮಾಡುವಂತೆ ಸಿಎಂ ಯಡಿಯೂರಪ್ಪ ಸೂಚನೆ

ಡಿವಿಜಿ ಸುದ್ದಿ, ಬೆಂಗಳೂರು: ರಾಜ್ಯಾದ್ಯಂತ ಮಳೆಯ ಅಬ್ಬರ ಹೆಚ್ಚಾಗುತ್ತಿದ್ದು, ಈ ಬಗ್ಗೆ ಸೂಕ್ತ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳುವಂತೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಮುಖ್ಯಕಾರ್ಯದರ್ಶಿಗಳಿಗೆ ಸೂಚನೆ ನೀಡಿದ್ದಾರೆ.

ರಾಜ್ಯದಲ್ಲಿ ಮೂರ್ನಾಲ್ಕು ದಿನದಿಂದ ಭಾರೀ ಮಳೆ ಆಗುತ್ತಿದ್ದು, ಹಲವೆಡೆ ಪ್ರವಾಹ ಪರಿಸ್ಥಿತಿ ಸೃಷ್ಟಿಯಾಗಿದೆ. ಆಸ್ಪತ್ರೆಯಲ್ಲಿದ್ದರೂ ಸಿಎಂ ಯಡಿಯೂರಪ್ಪ ಎಲ್ಲಾ ಡಿಸಿಗಳಿಂದ ಮಾಹಿತಿ ಪಡೆದು, ಅವಾಂತರ ತಡೆಗೆ ಸಿಎಂ ಸೂಚನೆ ನೀಡಿದ್ದಾರೆ. ಅಲ್ಲದೇ ಮಳೆ ಅನಾಹುತ ತಡೆಯಲು ತುರ್ತಾಗಿ 50 ಕೋಟಿ ರೂಪಾಯಿ ಬಿಡುಗಡೆ ಮಾಡಲು ಮುಖ್ಯಕಾರ್ಯದರ್ಶಿಗೆ ಸಿಎಂ ಸೂಚನೆ ನೀಡಿದ್ದಾರೆ.

ಮುಖ್ಯಮಂತ್ರಿಗಳ ಟ್ವಿಟ್ಟರ್ ಖಾತೆಯಲ್ಲಿ ಈ ಬಗ್ಗೆ ಮಾಹಿತಿ ನೀಡಲಾಗಿದೆ. ರಾಜ್ಯಾದ್ಯಂತ ಮಳೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಸೂಕ್ತ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳುವಂತೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಮುಖ್ಯಕಾರ್ಯದರ್ಶಿಗಳಿಗೆ ಸೂಚನೆ ನೀಡಿದ್ದಾರೆ. ಮಳೆ ಬಗ್ಗೆ ಕ್ಷಣಕ್ಷಣದ ಮಾಹಿತಿ ತೆಗೆದುಕೊಳ್ಳುವುದು ಸೇರಿದಂತೆ ಎಲ್ಲಾ ಜಿಲ್ಲಾಧಿಕಾರಿಗಳ ಜೊತೆ ನಿರಂತರ ಸಂಪರ್ಕದಲ್ಲಿರಲು ಸೂಚನೆ ನೀಡಿದ್ದಾರೆ.

ತುರ್ತು ಸಂದರ್ಭಕ್ಕಾಗಿ ಕೂಡಲೇ 50 ಕೋಟಿ ರೂ. ಹಣವನ್ನು ಬಿಡುಗಡೆಗೊಳಿಸುವಂತೆ ಸೂಚನೆ ನೀಡಿದ್ದಾರೆ. ಅಲ್ಲದೇ ಕೆಲ ಜಿಲ್ಲಾಧಿಕಾರಿಗಳ ಜೊತೆ ಫೋನ್ ಮುಖಾಂತರ ಸಂಪರ್ಕ ಮಾಡಿದ ಮುಖ್ಯಮಂತ್ರಿಗಳು ಮಳೆಯ ಬಗ್ಗೆ ಮಾಹಿತಿಯನ್ನು ಪಡೆದುಕೊಂಡಿದ್ದಾರೆ ಎಂದು ಟ್ವೀಟ್ ಮಾಡುವ ಮೂಲಕ ತಿಳಿಸಲಾಗಿದೆ.

ಇನ್ನೂ ಚಿಕ್ಕಮಗಳೂರು ಜಿಲ್ಲಾಧಿಕಾರಿಗಳಿಗೆ ಇಂದು ಕರೆ ಮಾಡಿದ ಸಿಎಂ, ಮೂಡಿಗೆರೆ ತಾಲೂಕಿನ ಕೆಂಬತ್ಮಕ್ಕಿಯಲ್ಲಿ ಮಳೆಯಿಂದ ಹಾನಿಗೀಡಾದ 5 ಎಕರೆ ಬಾಳೆ ತೋಟವನ್ನು ಖುದ್ದು ವೀಕ್ಷಣೆ ಮಾಡಿ ಪರಿಹಾರ ನೀಡಲು ಸೂಚನೆ ನೀಡಿದ್ದಾರೆ.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

To Top