ಡಿವಿಜಿ ಸುದ್ದಿ, ಬೆಂಗಳೂರು: ದಕ್ಷಿಣ ಒಳನಾಡು ಹಾಗೂ ಕರಾವಳಿ ಜಿಲ್ಲೆಗಳಲ್ಲಿ ಸೆ. 5ರವರೆಗೆ ಭಾರಿ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ. ಸೆ. 3, 5 ರಂದು ಉತ್ತರ ಕನ್ನಡ, ಉಡುಪಿ ಮತ್ತು ದಕ್ಷಿಣ ಕನ್ನಡದಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ
ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಕೊಡಗು, ಹಾಸನ, ಮಲೆನಾಡಿನ ಶಿವಮೊಗ್ಗ ಚಿಕ್ಕಮಗಳೂರುಗಳಲ್ಲಿ ಗುಡುಗು ಸಹಿತ ಮಳೆ ಸುರಿಯುವ ಸೂಚನೆ ಇರುವುದರಿಂದ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಇನ್ನು ಬೆಂಗಳೂರು ನಗರ ಸುತ್ತಮುತ್ತಲ ಪ್ರದೇಶಗಳಲ್ಲಿ ಮುಂದಿನ ಎರಡು ದಿನಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದ್ದು, ಯೆಲ್ಲೊ ಅಲರ್ಟ್ ಘೋಷಿಸಲಾಗಿದೆ.
ಬೆಂಗಳೂರು ನಗರ ಮತ್ತು ಸುತ್ತಮುತ್ತಲ ಪ್ರದೇಶಗಳಲ್ಲಿ ಸೆಪ್ಟೆಂಬರ್ 2 ಮತ್ತು 3ರಂದು ಗುಡುಗು ಸಹಿತ ಮಳೆಯಾಗುವ ಸಂಭವವಿದೆ ಎಂದು ಭಾರತೀಯ ಹವಾಮಾನ ಇಲಾಖೆಯ ವಿಜ್ಞಾನಿ ಸಿ.ಎಸ್. ಪಾಟೀಲ್ ಮಾಹಿತಿ ನೀಡಿದ್ದಾರೆ.



