ಡಿವಿಜಿ ಸುದ್ದಿ, ಬೆಂಗಳೂರು:ರಾಜ್ಯದ ದಕ್ಷಿಣ ಒಳನಾಡು, ಕರಾವಳಿಯಲ್ಲಿ ಇಂದು ಮತ್ತು ನಾಳೆ(ಜೂನ್ 1) ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
30 ರಿಂದ 40 ಕಿ.ಮೀ ವೇಗದಲ್ಲಿ ಗಾಳಿ ಬೀಸಲಿದ್ದು, 8 ಜಿಲ್ಲೆಯಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ದಕ್ಷಿಣ ಕನ್ನಡ , ಉತ್ತರ ಕನ್ನಡ, ಶಿವಮೊಗ್ಗ, ಹಾಸನ , ಕೊಡಗು, ಮೈಸೂರು, ಚಿಕ್ಕಮಗಳೂರು, ಚಾಮರಾಜ ನಗರದಲ್ಲಿ ಮುನ್ನೆಚ್ಚರಿಕೆ ನೀಡಲಾಗಿದೆ. ಇನ್ನು ಉತ್ತರ ಒಳನಾಡಿನಲ್ಲಿ ಜೂ 2ರ ನಂತರ ಮಳೆಯಾಗಲಿದೆ.



