ಡಿವಿಜಿ ಸುದ್ದಿ, ಬೆಂಗಳೂರು: ಇಂದು ಉತ್ತರ ಒಳನಾಡು ಹಾಗೂ ನಾಳೆ ಜು.24 ರಂದು ರಾಜ್ಯದಾದ್ಯಂತ ಭಾರೀ ಮಳೆಯಾಗುವ ಸಾಧ್ಯತೆ ಇದೆ ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ಶಿವಮೊಗ್ಗ, ಕೊಡಗು, ಹಾಸನ, ಚಿಕ್ಕಮಗಳೂರು, ರಾಯಚೂರು, ಹಾವೇರಿ, ಧಾರವಾಡ, ಬೆಳಗಾವಿ, ಉತ್ತರ ಕನ್ನಡ, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಶುಕ್ರವಾರ ಗುಡುಗು, ಸಿಡಿಲು ಭಾರಿ ಮಳೆಯಾಗುವ ನಿರೀಕ್ಷೆ ಇದ್ದು, ಯೆಲ್ಲೊ ಅಲರ್ಟ್ ಘೋಷಿಸಲಾಗಿದೆ.
ಇಂದು ಕರಾವಳಿಯಲ್ಲಿ ಮಳೆ ಪ್ರಮಾಣ ತಗ್ಗಲಿದೆ. ಉತ್ತರ ಒಳನಾಡಿನಲ್ಲಿ ಗುಡುಗು, ಸಿಡಿಲು ಸಹಿತ ಮಳೆಯಾಗುವ ಸಂಭವವಿದೆ.



