ಡಿವಿಜಿ ಸುದ್ದಿ , ಬೆಂಗಳೂರು: ರಾಜ್ಯದ ಯಾದಗಿರಿ, ವಿಜಯಪುರ, ಕಲಬುರ್ಗಿ, ಬೀದರ್, ಬೆಳಗಾವಿ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಆ.16ರಂದು ಭಾರಿ ಮಳೆಯಾಗಲಿದೆ. ಹೀಗಾಗಿ ಈ ಪ್ರದೇಶದಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಕರಾವಳಿ ಜಿಲ್ಲೆಗಳಲ್ಲಿ ಆ.16ರಿಂದ 20ರವರೆಗೆ ಹೆಚ್ಚು ಮಳೆಯಾಗುವ ನಿರೀಕ್ಷೆಯಿದ್ದು, ಐದೂ ದಿನ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ದಕ್ಷಿಣ ಒಳನಾಡಿನಲ್ಲಿ ಕೆಲವೆಡೆ ಸಾಧಾರಣ ಮಳೆಯಾಗಲಿದೆ.



