ಡಿವಿಜಿ ಸುದ್ದಿ, ಬೆಂಗಳೂರು: ರಾಜ್ಯದ ಉತ್ತರ ಒಳನಾಡು ಹಾಗೂ ಕರಾವಳಿಯಲ್ಲಿ ಇಂದು ಭಾರಿ ಮಳೆ ಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಯಾದಗಿರಿ, ವಿಜಯಪುರ, ರಾಯಚೂರು, ಕೊಪ್ಪಳ, ಕಲಬುರ್ಗಿ, ಹಾವೇರಿ, ಗದಗ, ಧಾರವಾಡ, ಬೀದರ್, ಬೆಳಗಾವಿ, ಬಾಗಲಕೋಟೆ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಹೆಚ್ಚು ಮಳೆಯಾಗುವ ನಿರೀಕ್ಷೆ ಇರುವುದರಿಂದ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಕರಾವಳಿ ಜಿಲ್ಲೆಗಳಲ್ಲಿ ಆ.19ರವರೆಗೆ ಹೆಚ್ಚು ಮಳೆಯಾಗಲಿದ್ದು, ಗಂಟೆಗೆ 50 ಕಿ.ಮೀ ವೇಗದಲ್ಲಿ ಗಾಳಿ ಬೀಸಲಿದೆ. ಮೀನುಗಾರರು ಕಡಲಿಗೆ ಇಳಿಯಬಾರದು ಎಂದು ಇಲಾಖೆ ಎಚ್ಚರಿಸಿದೆ.



