ಡಿವಿಜಿ ಸುದ್ದಿ, ಬೆಂಗಳೂರು : ರಾಜ್ಯದಲ್ಲಿ ವಾಯುಭಾರ ಕುಸಿತದಿಂದ ಮಳೆಯಾಗುತ್ತಿದ್ದು, ಈ ಬಾರಿ ಮುಂಗಾರು ವಿಳಂಬವಾಗುವ ಸಾಧ್ಯತೆ ಇದೆ ಎಂದು ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ನಿರ್ದೇಶಕ ಜಿ.ಎಸ್. ಶ್ರೀನಿವಾಸ ರೆಡ್ಡಿ ತಿಳಿಸಿದ್ದಾರೆ.
ಈ ಬಾರಿಯ ಮುಂಗಾರು ನಿಗದಿತ ವೇಳೆಗೆ ಬರುವ ಲಕ್ಷಣಗಳಿದ್ದರೂ ವಾಯುಭಾರ ಕುಸಿತದಿಂದ ತಡವಾಗುವ ಸಾಧ್ಯತೆ ಇದೆ. ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತ ಸಂಭವಿಸಿದ್ದರಿಂದ ಇಂದು ಮತ್ತು ನಾಳೆ ದಕ್ಷಿಣ ಒಳನಾಡು, ಕರಾವಳಿಯಲ್ಲಿ ಭಾರೀ ಮಳೆ ಆಗಲಿದೆ ಎಂದು ತಿಳಿಸಿದರು.
ಉಡುಪಿ, ದಕ್ಷಿಣ ಕನ್ನಡ , ಉತ್ತರ ಕನ್ನಡ, ಶಿವಮೊಗ್ಗ, ಕೊಡಲು, ಚಿಕ್ಕಮಗಳೂರಿನಲ್ಲಿ ಭಾರೀ ಮಳೆಯಾಗಲಿದೆ. ಇನ್ನು ಉತ್ತರ ಒಳನಾಡಿನ ಬೆಳಗಾವಿ, ಹಾವೇರಿಯಲ್ಲಿಯೂ ಮಳೆಯಾಗಲಿದೆ.