ಡಿವಿಜಿ ಸುದ್ದಿ, ಬೆಂಗಳೂರು: ರಾಜ್ಯದ ದಕ್ಷಿಣ ಒಳನಾಡು ಹಾಗೂ ಕರಾವಳಿಯಲ್ಲಿ ಇಂದು ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಶಿವಮೊಗ್ಗ, ಕೊಡಗು, ಚಿಕ್ಕಮಗಳೂರು, ಉತ್ತರ ಕನ್ನಡ, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ಭಾರೀ ಮಳೆ ಬೀಳುವ ಸಾಧ್ಯತೆ ಇದ್ದು, ಅರೆಂಜ್ ಅಲರ್ಟ್ ಘೋಷಿಸಲಾಗಿದೆ. ಕರಾವಳಿಯಲ್ಲಿ ಸೆ.18 ವರೆಗೆ ಮಳೆಯಾಗಲಿದ್ದು, ದಕ್ಷಿಣ ಒಳನಾಡಿನಲ್ಲಿ ಸೆ.15 ವರೆಗೆ ಮಳೆ ಆಗಲಿದೆ.
ಉತ್ತರ ಒಳನಾಳನಾಡಿನ ಬೀದರ್, ಕಲಬುರ್ಗಿ, ಯಾದಗಿರಿಯಲ್ಲಿ ಮುಂದಿನ ಎರಡು ದಿನ ಭಾರೀ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.



