ಡಿವಿಜಿ ಸುದ್ದಿ,ಬೆಂಗಳೂರು: ಅರಬ್ಬಿ ಸಮುದ್ರದಲ್ಲಿ ಮೇಲ್ಮೈ ಸುಳಿಗಾಳಿ ಹೆಚ್ಚಾಗುತ್ತಿರುವುದರಿಂದ ರಾಜ್ಯದ ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ಐದು ದಿನಗಳವರೆಗೆ ಭಾರಿ ಮಳೆಯಾಗುವ ಸಾಧ್ಯತೆ ಇದೆ’ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ಕರಾವಳಿ ಭಾಗದಲ್ಲಿ ವ್ಯಾಪಕ ಮಳೆಯಾಗುತ್ತಿದೆ. ಅದೇ ರೀತಿ ದಕ್ಷಿಣ ಒಳನಾಡು ಹಾಗೂ ಉತ್ತರ ಒಳನಾಡಿನಲ್ಲೂ ಮಳೆಯಾಗುತ್ತಿದೆ. ಇದು ಜೂ.3ರವರೆಗೆ ಮುಂದುವರಿಯಲಿದೆ.ಬೆಂಗಳೂರಿನಲ್ಲಿ ಮುಂದಿನ ಐದು ದಿನ ಸಾಧಾರಣ ಮಳೆಯಾಗಲಿದೆ.
ರಾಜ್ಯದಲ್ಲಿ ಮುಂಗಾರು ಚುರುಕುಗೊಂಡಿದ್ದು, ಬೆಳಗಾವಿ, ಬೀದರ್, ಧಾರವಾಡ, ಹಾವೇರಿ, ಕಲಬುರ್ಗಿ, ವಿಜಯಪುರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಕೊಡಗು, ಕೋಲಾರ, ರಾಮನಗರ, ಶಿವಮೊಗ್ಗ, ತುಮಕೂರು ಹಾಗೂ ಕರಾವಳಿ ಭಾಗದ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಗುಡುಗು, ಸಿಡಿಲು ಸಹಿತ ಭಾರಿ ಮಳೆಯಾಗುವ ನಿರೀಕ್ಷೆ ಇದೆ.



