ಡಿವಿಜಿ ಸುದ್ದಿ, ಬೆಂಗಳೂರು: ರಾಜ್ಯದ ಕರಾವಳಿ, ಒಳನಾಡಿನಲ್ಲಿ ಇನ್ನೂ ಐದು ದಿನ ಭಾರೀ ಮಳೆಯಾಗಲಿದ್ದು, ಮುಂದಿನ ಎರಡು ದಿನ ಹೆಚ್ಚು ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
7 ಜಿಲ್ಲೆಯಲ್ಲಿ ಆರೆಂಜ್ ಅಲರ್ಟ್ : ರಾಜ್ಯದಲ್ಲಿ ಮುಂಗಾರು ಮಳೆ ಚುರುಕಾಗಿದ್ದು, 7ಜಿಲ್ಲೆಯಲ್ಲಿ ಅರೆಂಜ್ ಅಲರ್ಟ್ ಘೋಷಿಸಲಾಗಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಹಾಸನ, ಕೊಡಗು ಹಾಗೂ ಶಿವಮೊಗ್ಗ ಜಿಲ್ಲೆಯಲ್ಲಿ ಹೆಚ್ಚು ಮಳೆಯಾಗಲಿದೆ.
ಇನ್ನು ಬಾಗಲಕೋಟೆ, ಕಲಬುರಗಿ, ವಿಜಯಪುರ, ಯಾದಗಿರಿ ಜಿಲ್ಲೆಯಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಆ. 13 ನಂತರ ಮಳೆಯ ಪ್ರಮಾಣ ಸ್ವಲ್ಪ ತಗ್ಗಲಿದೆ.



