ಡಿವಿಜಿ ಸುದ್ದಿ, ಬೆಂಗಳೂರು: ರಾಜ್ಯದ ಕರಾವಳಿ ಹಾಗೂ ಒಳನಾಡಿನಲ್ಲಿ ಮುಂಗಾರು ಮಳೆ ಅಬ್ಬರಿಸುತ್ತಿದ್ದು, ಜುಲೈ 9 ಮತ್ತು 10ರಂದು ರಾಜ್ಯದ ಎಲ್ಲ ಕಡೆ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ಅದರಲ್ಲೂ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಹಾಸನ, ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗುವ ಸಾಧ್ಯತೆ ಇದೆ. ಈ ಜಿಲ್ಲೆಗಳಲ್ಲಿ ಎರಡು ದಿನಗಳವರಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.
ಅರಬ್ಬಿ ಸಮುದ್ರದಿಂದ ರಾಜ್ಯದ ಕರಾವಳಿಯೆಡೆಗೆ ಗಂಟೆಗೆ 40ರಿಂದ 50 ಕಿ.ಮೀ ವೇಗದಲ್ಲಿ ಗಾಳಿ ಬೀಸುತ್ತಿದೆ. ಮೀನುಗಾರರಿಗೆ ಎಚ್ಚರಿಕೆ ನೀಡಲಾಗಿದೆ. ಇನ್ನು ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಕೋಲಾರ, ಮಂಡ್ಯ, ರಾಮನಗರ ಹಾಗೂ ತುಮಕೂರು ಜಿಲ್ಲೆಗಳಲ್ಲೂ ಹೆಚ್ಚು ಮಳೆ ಬೀಳಲಿದೆ. ಹೀಗಾಗಿ ಯೆಲ್ಲೊ ಅಲರ್ಟ್ ಘೋಷಿಸಲಾಗಿದೆ. ಉತ್ತರ ಒಳನಾಡಿನಲ್ಲಿ ಮಳೆ ತಗ್ಗಿದ್ದು, ಕೆಲವೆಡೆ ಸಾಧಾರಣ ಮಳೆಯಾಗಲಿದೆ ಎಂದು ತಿಳಿಸಿದೆ.