ಡಿವಿಜಿಸುದ್ದಿ.ಕಾಂ, ದಾವಣಗೆರೆ : ಇವತ್ತು ಬೆಳ್ಳಂಬೆಳಗ್ಗೆ ದಾವಣಗೆರೆ ಮಹಾನಗರ ಪಾಲಿಕೆ ಮತ್ತು ಸ್ಮಾರ್ಟ್ ಸಿಟಿ ಯೋಜನೆ ಅಧಿಕಾರಿಗಳ ಕಾರ್ಯಾಚರಣೆಗೆ ಸಿಟಿ ಮಂದಿ ಶಾಕ್ ಆಗಿದ್ರು. ರಾಜಕಾಲುವೆ ಒತ್ತುವರಿ ತೆರೆವು ಕಾರ್ಯಾಚರಣೆಗೆ ಇಳಿದ ಅಧಿಕಾರಿಗಳ ಜೊತೆ ವಾಗ್ವಾದ ಸಹ ನಡೆಸಿದ್ರು. ಅಷ್ಟಕ್ಕೂ ಇದೆಲ್ಲ ಎಲ್ಲಿ ನಡೆಯಿತು. ಏನೆಲ್ಲಾ ಹೈಡ್ರಾಮ ಆಯ್ತು.. ಅಧಿಕಾರಿಗಳು ದಿಢೀರ್ ಕಾರ್ಯಾಚರಣೆ ಇಳಿದಿದ್ಯಾಕೆ ಅನ್ನೋ ಸಂಪೂರ್ಣ ವರದಿ ಇಲ್ಲಿದೆ ನೋಡಿ..
ದಾವಣಗೆರೆ ಮಹಾನಗರ ಪಾಲಿಕೆ ಮತ್ತು ಸ್ಮಾರ್ಟ್ ಸಿಟಿ ಯೋಜನೆ ಅಧಿಕಾರಿಗಳು ಇವತ್ತು ರಾಜಕಾಲುವೆ ಅಕ್ರಮ ಒತ್ತುವರಿ ಕಾರ್ಯಾಚರಣೆ ನಡೆಸಿದ್ರು. ನಗರದ ವಿವೇಕಾನಂದ ಬಡಾವಣೆಯಲ್ಲಿ ಅಕ್ರಮ ಒತ್ತುವರಿ ತೆರೆವು ಕಾರ್ಯಾಚರಣೆಗೆಳಿದಾಗ ಅಧಿಕಾರಿಗಳ ವಿರುದ್ಧ ಸಾರ್ವಜನಿಕರ ವಾಗ್ವಾದ ನಡೆಸಿದರು. ಅಂತಿಮವಾಗಿ ಸ್ಥಳೀಯರು ಮತ್ತು ಸಾಮಾಜಿಕ ಕಾರ್ಯಕರ್ತರ ನೆರವಿನಿಂದ ಒತ್ತುವರಿ ತೆರವುಗೊಳಿಸಲಾಯಿತು.
ಪ್ರತಿ ಸಲ ಮಳೆ ಬಂದಾಗಲೂ ಕೆಎಸ್ ಆರ್ ಟಿಸಿ ಬಸ್ ನಿಲ್ದಾಣ ಕೆರೆಯಂತಾಗುತ್ತಿತ್ತು. ಇದರಿಂದ ಸಾರ್ವಜನಿಕರು ಮಹಾನಗರ ಪಾಲಿಕೆ ಅಧಿಕಾರಿಗಳ ಹಿಡಿ ಶಾಪ ಹಾಕುತ್ತಿದ್ದರು. ಇದೀಗ ರಾಜಕಾಲುವೆ ಒತ್ತುವರಿ ತೆರವಿಗಾಗಿ ಸ್ಮಾರ್ಟ್ ಸಿಟಿ ಯೋಜನೆ ಅಡಿಯಲ್ಲಿ 20 ಕೋಟಿ ಹಣ ಬಿಡುಗಡೆಯಾಗಿರುವುದರಿಂದ ಅಧಿಕಾರಿಗಳು ಪೊಲೀಸ್ ಬಂದೋಬಸ್ತ್ ನಲ್ಲಿ ಒತ್ತುವರಿ ತೆರವುಗೊಳಿಸಿದರು.
ಒಟ್ಟು 8 ಕಿಮೀ ದೂರದ ಒತ್ತುವರಿ ತೆರವು ಕಾರ್ಯಾಚರಣೆಗೆ 20 ಕೋಟಿ ವೆಚ್ಚದಲ್ಲಿ ಕಾಮಗಾರಿ ಕೈಗೆತ್ತಿಕೊಳ್ಳಲಾಗಿದೆ. ಕೆಲವರು ಸ್ವಯಂ ಪ್ರೇರಿತರಾಗಿ ಒತ್ತುವರಿ ಕಾರ್ಯಾಚರಣೆ ಸಹಕಾರ ನೀಡಿದ್ರೆ, ಇನ್ನು ಕೆಲವರು ವಿರೋಧ ವ್ಯಕ್ತಪಡಿಸಿದರು. ಅಂತಿಮವಾಗಿ ಇವತ್ತು ವಿವೇಕಾನಂದ ಬಡಾವಣೆಯಲ್ಲಿ ಮೂರು ಕಿ.ಮೀನಷ್ಟು ಅಕ್ರಮ ಕಟ್ಟಡ ತೆರವುಗೊಳಿಸಲಾಯಿತು.