ಡಿವಿಜಿ ಸುದ್ದಿ, ಬೆಂಗಳೂರು: ನಟ ಸಾರ್ವಭೌಮ, ಕರ್ನಾಟಕ ಸಾಂಸ್ಕೃತಿಕ ರಾಯಭಾರಿ ಡಾ. ರಾಜ್‌ಕುಮಾರ್‌ಗೆ ‘ಭಾರತ ರತ್ನ’ ನೀಡಲು ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡುವಂತೆ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪನವರಿಗೆ ಮನವಿ ಸಲ್ಲಿಸಲಾಯಿತು.
ಅಖಿಲ ಕರ್ನಾಟಕ ಶಿವರಾಜ್ ಕುಮಾರ್ ಅಭಿಮಾನಿಗಳ ಸಂಘ ಮತ್ತು ಅಖಿಲ ಕರ್ನಾಟಕ ರಾಜರತ್ನ ಪುನೀತ್ ರಾಜ್‍ಕುಮಾರ್ ಅಭಿಮಾನಿಗಳ ಸಂಘದ ಇಂದು ಮುಖ್ಯಮಂತ್ರಿ ಅವರನ್ನು ಭೇಟಿ ಮಾಡಿ ಮನವಿ ಮಾಡಿದರು. ಇದೇ ವೇಳೆ ಚಾಮರಾಜನಗರ ತಾಲೂಕಿಗೆ ಡಾ. ರಾಜ್ ಕುಮಾರ್ ತಾಲೂಕು ಎಂದು ನಾಮಕರಣ ಮಾಡಬೇಕೆಂದು ಒತ್ತಾಯಿಸಿದರು. ಬೆಂಗಳೂರಿನ ಮಾಗಡಿ ರಸ್ತೆಯ ಮೆಟ್ರೋ ನಿಲ್ದಾಣಕ್ಕೆ ಡಾ. ರಾಜ್ ಕುಮಾರ್ ನಿಲ್ದಾಣ ಎಂದು ನಾಮಕರಣ ಮಾಡಬೇಕೆಂದು ಸಹ ಮನವಿ ಸಲ್ಲಿಸಲಾಯಿತು.
ಕನ್ನಡ ಚಲನಚಿತ್ರ ರಂಗದಲ್ಲಿ 34 ವರ್ಷ ಪೂರೈಸಿರುವ ಕರುನಾಡ ಚಕ್ರವರ್ತಿ ಶಿವರಾಜ್ ಕುಮಾರ್ ಅವರಿಗೆ ಪದ್ಮಶ್ರೀ ಪ್ರಶಸ್ತಿ ನೀಡುವಂತೆ ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಬೇಕೆಂದು ಅಭಿಮಾನಿಗಳ ಸಂಘ ಸಿಎಂಗೆ ಮನವಿ ಮಾಡಿದೆ.
ಡಿವಿಜಿ ಸುದ್ದಿ, ವಾಟ್ಸ್ಆಪ್ :7483892205



