Connect with us

Dvgsuddi Kannada | online news portal | Kannada news online

ರಾಮಮಂದಿರ ನಿರ್ಮಾಣದಿಂದ ದೇಶದಲ್ಲಿ ರಾಮರಾಜ್ಯ ಸ್ಥಾಪನೆ: ಬಾಬಾ ರಾಮ್‍ದೇವ್

ರಾಷ್ಟ್ರ ಸುದ್ದಿ

ರಾಮಮಂದಿರ ನಿರ್ಮಾಣದಿಂದ ದೇಶದಲ್ಲಿ ರಾಮರಾಜ್ಯ ಸ್ಥಾಪನೆ: ಬಾಬಾ ರಾಮ್‍ದೇವ್

ಲಕ್ನೋ: ಶತಕೋಟಿ ಭಾರತೀಯರ ಶತಮಾನಗಳ ಹೋರಾಟದ ಫಲವಾಗಿ ಇಂದು ಅಯೋಧ್ಯೆಯಲ್ಲಿ ಭೂಮಿ ಪೂಜೆ ಕಾರ್ಯಕ್ರಮ ನೆರವೇರಲಿದೆ. ರಾಮಂದಿರ ನಿರ್ಮಾಣದೊಂದಿಗೆ ಭಾರತದಲ್ಲಿ ರಾಮರಾಜ್ಯ ಸ್ಥಾಪನೆಯಾಗಲಿದೆ ಎಂದು ಯೋಗಗುರು ಬಾಬಾ ರಾಮ್‍ದೇವ್ ಹೇಳಿದ್ದಾರೆ.

ಬೆಳಗ್ಗೆ ಆಂಜನೇಯನ ದೇವಾಲಯಕ್ಕೆ ಭೇಟಿ ನೀಡಿ ಮಾಧ್ಯಮದೊಂದಿಗೆ ಮಾತನಾಡಿದ ಅವರು, ಆಗಸ್ಟ್ 05 ದೇಶದ ಜನರಿಗೆ  ಐತಿಹಾಸಿಕ ದಿನವಾಗಿದೆ. ಈ ದಿನವನ್ನು ನಾವೆಲ್ಲರೂ ದೀರ್ಘಕಾಲ ನೆನಪಿನಟ್ಟಿಕೊಳ್ಳುವಂತಹದು.  ರಾಮದೇವಾಲಯದ ನಿರ್ಮಾಣದೊಂದಿಗೆ ಭಾರತದಲ್ಲಿ ರಾಮರಾಜ್ಯ ಸ್ಥಾಪನೆಯಾಗಲಿದೆ ಎಂಬ ವಿಶ್ವಾಸವಿದೆ ಎಂದರು.

ram temple 2 800x568 1

ಪ್ರಧಾನಿ ಮೋದಿಯವರು ಆಂಜನೇಯನ ದೇವಾಲಯಕ್ಕೆ ಭೇಟಿ ನೀಡಲಿದ್ದಾರೆ. ಈ ಹಿನ್ನೆಲೆಯಲ್ಲಿ ದೇವಾಲಯವನ್ನು ಈಗಾಗಲೇ ಸ್ಯಾನಿಟೈಸ್ ಮಾಡಲಾಗಿದೆ.  ಹನುಮಂತ ಇಲ್ಲದೇ ರಾಮನ ಯಾವುದೇ ಕೆಲಸ ಆರಂಭಗೊಳ್ಳುವುದಿಲ್ಲ. ಈ ಕಾರಣಕ್ಕೆ ನರೇಂದ್ರ ಮೋದಿ ಮತ್ತು ಯೋಗಿ ಆದಿತ್ಯನಾಥ್ ಅವರು ಮೊದಲು ಹನುಮಂತನ ಪೂಜೆ ಮಾಡಿ ಆಶೀರ್ವಾದ ಪಡೆದ ಬಳಿಕ ರಾಮ ದೇವಸ್ಥಾನದ ಭೂಮಿ ಪೂಜೆಗೆ ತೆರಳುತ್ತಿದ್ದಾರೆ.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ರಾಷ್ಟ್ರ ಸುದ್ದಿ

To Top