Connect with us

Dvgsuddi Kannada | online news portal | Kannada news online

ಕ್ಯಾನ್ಸರ್ ನಿಂದ ಪವಾಡ ರೀತಿಯಲ್ಲಿ ಬದುಕಿದ್ದೇನೆ, ಬದುಕಿರುವವರೆಗೂ ಸಮಾಜ ಸೇವೆ ಮಾಡ್ತೀನಿ: ಮುತ್ತಪ್ಪ ರೈ

ಪ್ರಮುಖ ಸುದ್ದಿ

ಕ್ಯಾನ್ಸರ್ ನಿಂದ ಪವಾಡ ರೀತಿಯಲ್ಲಿ ಬದುಕಿದ್ದೇನೆ, ಬದುಕಿರುವವರೆಗೂ ಸಮಾಜ ಸೇವೆ ಮಾಡ್ತೀನಿ: ಮುತ್ತಪ್ಪ ರೈ

ಡಿವಿಜಿ ಸುದ್ದಿ, ರಾಮನಗರಕ್ಯಾನ್ಸರ್ ಗೆ ತುತ್ತಾಗಿ ಸಾವಿನ ದವಡೆಯಿಂದ ಬದುಕಿ ಬಂದಿದ್ದೇನೆ. ಇನ್ನು ಎಷ್ಟು ದಿನ ಬದುಕುತ್ತೇನೋ ಗೊತ್ತಿಲ್ಲ. ಆದರೆ,  ಬದುಕಿರುವ ವರೆಗೂ ಸಮಾಜ ಸೇವೆಯಲ್ಲಿ ತೊಡಗಿರುತ್ತೇನೆ ಎಂದು ಜಯ‌ ಕರ್ನಾಟಕ ಸಂಘಟನೆ ಸಂಸ್ಥಾಪಕ ಮುತ್ತಪ್ಪ ರೈ ಹೇಳಿದರು.

ಈ ಬಗ್ಗೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ವರ್ಷದ ಹಿಂದೆ ಬೆನ್ನು ನೋವು‌ ಕಾಣಿಸಿಕೊಂಡಿತು. ಪರೀಕ್ಷೆ ಮಾಡಿಸಿದಾಗ ಲಿವರ್ ಕ್ಯಾನ್ಸರ್ ಪತ್ತೆಯಾಯಿತು. ಆಗ ದೆಹಲಿಯ ಮ್ಯಾಕ್ಸ್, ಚೆನ್ಮೈನ ಅಪೋಲೊ , ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದಿದ್ದೇನೆ. ಶೇ 90ರಷ್ಟು ಗುಣ ಆಗಿರುವುದಾಗಿ ವೈದ್ಯರು ಹೇಳಿದ್ದಾರೆ.  ಆದರೆ ನಂತರದಲ್ಲಿ ಮಿದುಳಿಗೆ‌ ಕ್ಯಾನ್ಸರ್‌ ತಗುಲಿತ್ತು. ಕೆಲವು ತಿಂಗಳಷ್ಟೇ ಬದುಕುವುದಾಗಿ ವೈದ್ಯರು ತಿಳಿಸಿದ್ದಾರೆ.

muthappa rai 2

ಇದರಿಂದ ನಾನು ಬಿಡದಿಗೆ ವಾಪಸ್ ಆಗಿದ್ದೇನೆ.   ಐದು ಗುಂಡು ಬಿದ್ದರೂ‌ ಬದುಕಿದವನು. ಸಾವಿಗೆ ಹೆದರುವುದಿಲ್ಲ. ವಿಲ್ ಪವರ್‌ನಿಂದ ಬದುಕುತ್ತಿದ್ದೇನೆ. ನನಗೀಗ 68 ವರ್ಷ. ಇನ್ನು ಎಷ್ಟು ವರ್ಷ ಬದುಕುತ್ತೇನೋ ಗೊತ್ತಲ್ಲ. ಇರುವವರೆಗೂ ಸಮಾಜ ಸೇವೆ ಮಾಡುತ್ತೇನೆ ಎಂದು ತಿಳಿಸಿದರು.

ನಾನು ವರ್ಷಕ್ಕೆ 25-30 ಕೋಟಿ ತೆರಿಗೆ ಕಟ್ಟುತ್ತಿದ್ದೇನೆ. ಆಸ್ತಿ ಕುರಿತು ಈಗಾಗಲೇ ವಿಲ್ ಮಾಡಿಸಿದ್ದು, ಮಕ್ಕಳಿಗೂ ತಿಳಿಸಿದ್ದೇನೆ. ಕಳೆದ 15-20 ವರ್ಷದಿಂದ ನನ್ನ ಜೊತೆಗಿರುವವರಿಗೆ ಒಂದೊಂದು ನಿವೇಶನ ಕೊಡುವಂತೆ ತಿಳಿಸಿದ್ದೇನೆ.

ಕರ್ನಾಟಕ ಅಥ್ಲೆಟಿಕ್ಸ್ ಸಂಸ್ಥೆ ಅಧ್ಯಕ್ಷ‌ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು,  ಜಯ ಕರ್ನಾಟಕ ಸಂಘಟನೆಯ ಅಧ್ಯಕ್ಷ ಸ್ಥಾನಕ್ಕೆ ಹೊಸಬರನ್ನು ಆಯ್ಕೆ ಮಾಡಿದ್ದೇನೆ ಎಂದರು.

 

 

 

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

ದಾವಣಗೆರೆ

Advertisement
Advertisement Enter ad code here

Title

To Top