ಡಿವಿಜಿ ಸುದ್ದಿ, ರಾಮನಗರ: ಮದ್ಯ ಸಿಗದೇ ಮಾನಸಿಕ ಖಿನ್ನತೆಗೆ ಒಳಗಾಗಿದ್ದ ವ್ಯಕ್ತಿಯೊಬ್ಬ ನೇಣು ಬಿಗುದುಕೊಂಡು ಅತ್ಮಹತ್ಯೆಗೆ ಶರಣಾದ ಘಟನೆ ಮಾಗಡಿ ತಾಲೂಕಿನ ಹುಲಿಕೆರೆ ಗ್ರಾಮದಲ್ಲಿ ನಡೆದಿದೆ.
ಹುಲಿಕೆರೆ ಗ್ರಾಮದ ನಿವಾಸಿ ರಮೇಶ್ (35) ಆತ್ಮಹತ್ಯೆಗೆ ಶರಣಾದ ವ್ಯಕ್ತಿ. ಕೊರೊನಾ ವೈರಸ್ ಭೀತಿಯಿಂದ ದೇಶದಾದ್ಯಂತ ಲಾಕ್‍ಡೌನ್ ಆಗಿದೆ. ಇದರಿಂದ ಮದ್ಯ ಮಾರಾಟವನ್ನು ನಿಲ್ಲಿಸಲಾಗಿದೆ. ಕಳೆದ ಒಂದು ವಾರದಿಂದ ಜಿಲ್ಲೆಯಲ್ಲಿ ವೈನ್ ಸ್ಟೋರ್, ಬಾರ್ ಅಂಡ್ ರೆಸ್ಟೋರೆಂಟ್, ಎಂಎಸ್‍ಐಎಲ್ ಮಳಿಗೆಗಳಿಗೆ ಬೀಗ ಹಾಕಲಾಗಿದೆ.
ಮದ್ಯಕ್ಕಾಗಿ ಹುಡುಕಾಡ ನಡೆಸಿದ್ದ ರಮೇಶ್ ಗೆ ಮದ್ಯ ಸಿಕ್ಕಿಲ್ಲ. ಇದರಿಂದ ಮಾನಸಿಕ ಖಿನ್ನತೆಗೆ ಒಳಗಾಗಿ ಬೆಳಗ್ಗೆ 6 ಗಂಟೆಯಿಂದಲೇ ಹುಲಿಕಲ್ ಗ್ರಾಮದ ಸುತ್ತಮುತ್ತಲಿನ ಗ್ರಾಮಗಳಲ್ಲಿ ಹುಡುಕಾಡಿದ್ದರೂ ಎಣ್ಣೆ ಸಿಕ್ಕಿರಲಿಲ್ಲ. ಇದರಿಂದ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ.
ರಮೇಶ್‍ಗೆ ವಿವಾಹವಾಗಿದ್ದು ಪತ್ನಿ ಮತ್ತು ಮಕ್ಕಳನ್ನು ಆಗಲಿದ್ದಾನೆ. ಮದ್ಯಕ್ಕೆ ವ್ಯಸನಿಯಾಗಿದ್ದ ರಮೇಶ್, ಪ್ರತಿ ದಿನದ ಕೂಲಿ ಹಣವನ್ನು ಮದ್ಯ ಖರೀಸಿದ ಕುಡಿಯುತ್ತಿದ್ದ ಎಂದು ಗ್ರಾಮಸ್ಥರು ದೂರಿದ್ದಾರೆ. ಕುದೂರು ಪೊಲೀಸರು ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ



