ಡಿವಿಜಿ ಸುದ್ದಿ, ಚಾಮರಾಜನಗರ: ಕಾಂಗ್ರೆಸ್‌ನ 22 ಶಾಸಕರರು ರಾಜೀನಾಮೆಗೆ ಸಿದ್ಧರಿದ್ದು, ಹೈಕಮಾಂಡ್ ಒಪ್ಪಿಗೆ ಕೊಟ್ಟರೆ ಮೊದಲ ಹಂತದಲ್ಲಿ ಐದು ಶಾಸಕರನ್ನು ರಾಜೀನಾಮೆ ಕೊಡಿಸುತ್ತೇನೆ ಎಂದು ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಹೇಳಿದರು.
ಮಾಜಿ ಸಚಿವ ಉಮೇಶ್ ಕತ್ತಿ ನೇತೃತ್ವದಲ್ಲಿ ಬಿಜೆಪಿ ಶಾಸಕರು ಸಭೆ ಸೇರಿದ್ದ ಬಗ್ಗೆ ಪ್ರತಿಕ್ರಿ ನೀಡಿದ ಅವರು, ಉಮೇಶ್ ಕತ್ತಿ ನನ್ನ ಸ್ನೇಹಿತರು. ಅವರು ಮನೆಯಲ್ಲಿ ನಡೆದ ಪೂಜೆಯಲ್ಲಿ ಶಾಸಕರು ಭಾಗವಹಿಸಿದ್ದಾರೆ ಎಂಬ ಮಾಹಿತಿ ನನಗೆ ಸಿಕ್ಕಿದೆ. ಯಡಿಯೂರಪ್ಪ ಸರ್ಕಾರ ಇನ್ನೂ ಮೂರು ವರ್ಷ ಅಧಿಕಾರ ನಡೆಸಲಿದೆ. ನಂತರವೂ ಬಿಜೆಪಿ ಆಡಳಿತಕ್ಕೆ ಬರಲಿದೆ. ಈ ಜೀವ ಇರುವವರೆಗೂ ಬಿಜೆಪಿಯಲ್ಲೇ ಇರುತ್ತೇನೆ ಎಂದರು.
ಕೆಲವು ಶಾಸಕರು ಸಿದ್ದರಾಮಯ್ಯ ಅವರನ್ನು ಭೇಟಿ ಬಗ್ಗೆ ಪ್ರತಿಕ್ರಿಯಿಸಿ, ಅವರೆಲ್ಲ ಏಳೆಂಟು ಬಾರಿ ಶಾಸಕರಾದವರು. ಮುಳುಗುತ್ತಿರುವ ಕಾಂಗ್ರೆಸ್ ಸೇರುವಷ್ಟು ಮೂರ್ಖರಲ್ಲ. ಹೀಗಾಗಿ ನಾನು ಯಡಿಯೂರಪ್ಪ ಪರ. ಈಗಲೇ ಹೈಕಮಾಂಡ್ ಒಪ್ಪಿಗೆ ಸೂಚಿಸಿದರೆ, ಐವರು ಕಾಂಗ್ರೆಸ್ 5 ಶಾಸಕರನ್ನು ರಾಜೀನಾಮೆ ಕೊಡಿಸುತ್ತೇನೆ ಎಂದರು.



