ಡಿವಿಜಿ ಸುದ್ದಿ, ಬೆಳಗಾವಿ: ರಾಜ್ಯದಲ್ಲಿ ಮದ್ಯ ಸಂಪೂರ್ಣ ನಿಷೇಧ ಮಾಡಲು ನಾನೇ ಮೊದಲಿ ಬೆಂಬಲ ಸೂಚಿಸುತ್ತೇನೆ ಎಂದು ಸಚಿವ ರಮೇಶ್ ಜಾರಕಿಹೊಳಿ ಹೇಳಿದ್ದಾರೆ.
ಕೊರೊನಾ ವೈರಸ್ ಕುರಿತು ಅಥಣಿ ಪಟ್ಟಣದಲ್ಲಿ ಅಧಿಕಾರಿಗಳ ಸಭೆ ನಡೆಸಿದ ಬಳಿಕ ಮಾತನಾಡಿದ ಅವರು, ಕೊರೋನಾ ವೈರಸ್ ಬಂದು ಜನರಿಗೆ ಒಳ್ಳೆಯ ದಾರಿ ತೋರಿಸಿದೆ. ಕೆಟ್ಟ ಚಟಗಳನ್ನ ಕಡಿಮೆ ಮಾಡಲು ಅವಕಾಶ ಸಿಕ್ಕಿದೆ. ಮದ್ಯದಿಂದ ಬಡವರು ಹೆಚ್ಚಾಗಿ ಹಾಳಾಗೋದು, ಶ್ರೀಮಂತರಲ್ಲ. ಲಾಕ್‍ಡೌನ್‍ನಿಂದ ಮದ್ಯ ಸಿಗದ ಕಾರಣ ಗ್ರಾಮೀಣ ಭಾಗದ ಮಹಿಳೆಯರು ಸಂತಸದಿಂದ ಜೀವನ ಸಾಗಿಸುತ್ತಿದ್ದಾರೆ. ಹೀಗಾಗಿ ಮದ್ಯ ಸಂಪೂರ್ಣ ನಿಷೇಧಿಸಲು ಮಾಡಬೇಕು ಎನ್ನುವುದು ನನ್ನ ಅಭಿಪ್ರಾಯ ಎಂದರು.

ಬೆಳಗಾವಿ ಜಿಲ್ಲೆಯ ಉಸ್ತುವಾರಿ ನೋಡಿಕೊಳ್ಳಲು ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ್ ಶೆಟ್ಟರ್ ಎಲ್ಲ ಕಡೆ ಬರಬೇಕೆಂದೇನು ಇಲ್ಲ. ಎಲ್ಲರೂ ಜವಾಬ್ದಾರಿ ಹೊತ್ತು ಕೆಲಸ ಮಾಡಲಿದ್ದೇವೆ ಎಂದ ಹೇಳಿದರು.



