ಡಿವಿಜಿ ಸುದ್ದಿ, ದಾವಣಗೆರೆ: ಕರ್ನಾಟಕ ಸರ್ಕಾರದಿಂದ ಮೈಸೂರಿನಲ್ಲಿ ಸ್ಥಾಪಿತವಾಗಿರುವ ರಂಗಾಯಣವು 2020-21 ನೇ ಸಾಲಿನಲ್ಲಿ ರಂಗ ಶಿಕ್ಷಣ ಕೋರ್ಸ್‍ಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಹಂಪಿಯ ಕನ್ನಡ ವಿಶ್ವವಿದ್ಯಾನಿಲಯದ ಮಾನ್ಯತೆಯೊಂದಿಗೆ ರಂಗ ಶಿಕ್ಷಣದಲ್ಲಿ ಪ್ರತಿ ವರ್ಷ ಹತ್ತು ತಿಂಗಳ ಡಿಪ್ಲೊಮೊ ಕೋರ್ಸ್‍ನ್ನು ಆಯೋಜಿಸಲಾಗುತ್ತಿದೆ. ಈ ವರ್ಷವೂ ಅರ್ಜಿ ಆಹ್ವಾನಿಸಿದ್ದು, ರಂಗ ತರಬೇತಿ ಕೋರ್ಸ್ ನಲ್ಲಿ ಆಸಕ್ತರು ಅರ್ಜಿ ಸಲ್ಲಿಸಬಹುದು. ಕನಿಷ್ಠ ದ್ವಿತೀಯ ಪಿಯುಸಿ ಅಥವಾ ತತ್ಸಮಾನ ಪರೀಕ್ಷೆ ತೇರ್ಗಡೆ ಹೊಂದಿರಬೇಕು. ಅರ್ಜಿ ಸಲ್ಲಿಸಲು 18 ರಿಂದ 28 ವರ್ಷ ಒಳಗಿನ ಅಭ್ಯರ್ಥಿಗಳಾಗಿರಬೇಕು.
ಆಯ್ಕೆಯಾದ ವಿದ್ಯಾರ್ಥಿಗಳಿಗೆ ನಿಯಾಮಾನುಸಾರ ರಂಗಾಯಣದಿಂದಲೇ ವಸತಿ ವ್ಯವಸ್ಥೆ ಕಲ್ಪಿಸಲಾಗುವುದು ಹಾಗೂ ಮಾಹೆಯಾನು ರೂ.3000 ವಿದ್ಯಾರ್ಥಿ ವೇತನ ಹಾಗೂ ಮಾಸಿಕ ರೂ.2000 ಊಟೋಪಚಾರದ ಭತ್ಯೆ ಪಾವತಿಸಲಾಗುವುದು.
ರಂಗಶಾಲೆಗೆ ಸೇರಬಯಸುವ ವಿದ್ಯಾರ್ಥಿಗಳು ಜೂನ್ 25 ರಿಂದ ರಂಗಾಯಣದ ವೆಬ್‍ಸೈಟ್ ತಿತಿತಿ.ಡಿಚಿಟಿgಚಿಥಿಚಿಟಿಚಿ.oಡಿg ನಲ್ಲಿ ಅರ್ಜಿಯನ್ನು ಡೌನ್‍ಲೋಡ್ ಮಾಡಿಕೊಂಡು ಅಥವಾ ರಂಗಾಯಣದ ಕಚೇರಿಯಲ್ಲಿ ಖುದ್ದಾಗಿ ಪಡೆಯಬಹುದು.
ಅಗತ್ಯ ದಾಖಲೆಗಳೊಂದಿಗೆ ಭರ್ತಿ ಮಾಡಿದ ಅರ್ಜಿಯನ್ನು ಅರ್ಜಿ ಶುಲ್ಕ ರಂಗಕೈಪಿಡಿ ಸೇರಿ ಸಾಮಾನ್ಯ ವರ್ಗ ಅಭ್ಯರ್ಥಿಗಳಿಗೆ ರೂ.200 ಹಾಗೂ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ವರ್ಗದ ಅಭ್ಯರ್ಥಿಗಳಿಗೆ ರೂ.150 ಡಿ.ಡಿ ಯನ್ನು ಜಂಟಿ ನಿರ್ದೇಶಕರು, ರಂಗಾಯಣ, ಕಲಾಮಂದಿರ ಆವರಣ, ವಿನೋಬಾ ರಸ್ತೆ, ಮೈಸೂರು-570005 ಇವರ ಹೆಸರಿಲ್ಲಿ ಪಡೆದು ರಂಗಾಯಣದ ವಿಳಾಸಕ್ಕೆ ಜುಲೈ 10 ರ ಸಂಜೆ 5.30 ಗಂಟೆಯೊಳಗೆ ತಲುಪಿಸಬಹುದು.
ಅಂಚೆ ಮೂಲಕ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ನಿಮಗೆ ಕಚೇರಿಯಿಂದ ಕಳುಹಿಸಬೇಕಾಗಿರುವ ರಂಗಕೈಪಿಡಿ ಅಂಚೆ ವೆಚ್ಚ ರೂ.30 ಯನ್ನು ಒಳಗೊಂಡ ಮೊತ್ತದ ಡಿಡಿ ಸಲ್ಲಿಸುವುದು. ಅರ್ಜಿ ಸಲ್ಲಿಸಲು ನಿಗಧಿಪಡಿಸಿರುವ ಕಡೆಯ ದಿನಾಂಕದಿಂದ 10 ದಿನದೊಳಗೆ ಸಂದರ್ಶನದ ದಿನಾಂಕವನ್ನು ಪತ್ರಿಕೆಗಳಲ್ಲಿ ಪ್ರಕಟಿಸಲಾಗುವುದು. ಹಾಗೂ ಅಭ್ಯರ್ಥಿಗಳಿಗೆ ಪತ್ರ ಮುಖೇನ ತಿಳಿಸಲಾಗುವುದು.
ರಂಗಾಯಣದ ಆವರಣದಲ್ಲಿ ನಡೆಯುವ ಈ ಸಂದರ್ಶನಕ್ಕೆ ವಿದ್ಯಾರ್ಥಿಗಳು ತಮ್ಮ ಸ್ವಂತ ಖರ್ಚಿನಲ್ಲೇ ಹಾಜಾರಾಗತಕ್ಕದ್ದು, ಸಂದರ್ಶನದ ದಿನ ಮಧ್ಯಾಹ್ನ ಲಘು ಉಪಹಾರದ ವ್ಯವಸ್ಥೆಯನ್ನು ಮಾತ್ರ ಮಾಡಲಾಗುವುದು ಹಾಗೂ ಯಾವುದೇ ವಸತಿ ವ್ಯವಸ್ಥೆ ಇರುವುದಿಲ್ಲ.
ಪ್ರತಿ ವರ್ಷದಂತೆ ಈ ವರ್ಷವು 20 ವಿದ್ಯಾರ್ಥಿಗಳಿಗೆ ಮಾತ್ರ ಅವಕಾಶವಿರುತ್ತದೆ. ಕೋವಿಡ್ ನಿರ್ಬಂಧಗಳ ಹಿನ್ನಲೆಯಲ್ಲಿ ಸರ್ಕಾರವು ಹೊರಡಿಸಿರುವ ಮಾರ್ಗಸೂಚಿಗಳನ್ನು ಅನುಸರಿಸಿ ಈ ಕೋರ್ಸ್ ಆರಂಭವಾಗುವ ಹಾಗೂ ಮುಕ್ತಾಯವಾಗುವ ದಿನಾಂಕವನ್ನು ನಿಗದಿಗೊಳಿಸಲಾಗುವುದು.
ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ; 0821-2512639, ಮೊ.ಸಂಖ್ಯೆ: 9448938661, 9916600027, 9448422343 ಯನ್ನು ಸಂರ್ಪಕಿಸಬಹುದೆಂದು ರಂಗಾಯಣ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.