Connect with us

Dvgsuddi Kannada | online news portal | Kannada news online

ಇನ್ನು ಎರಡು ತಿಂಗಳು ಶಾಲೆ ಪ್ರಾರಂಭಿಸುವುದು ಬೇಡ: ಮಾಜಿ ಸಿಎಂ ಸಿದ್ದರಾಮಯ್ಯ

ಪ್ರಮುಖ ಸುದ್ದಿ

ಇನ್ನು ಎರಡು ತಿಂಗಳು ಶಾಲೆ ಪ್ರಾರಂಭಿಸುವುದು ಬೇಡ: ಮಾಜಿ ಸಿಎಂ ಸಿದ್ದರಾಮಯ್ಯ

ಡಿವಿಜಿ ಸುದ್ದಿ, ಬೆಂಗಳೂರುರಾಜ್ಯದಲ್ಲಿ ಕೊರೊನಾ ಸೋಂಕು ಮಿತಿ ಮೀರಿ ಹರಡುತ್ತಿದೆ. ಈ ಹಿನ್ನೆಲೆಯಲ್ಲಿ  ಕನಿಷ್ಟ ಇನ್ನೆರಡು ತಿಂಗಳು ಶಾಲೆಗಳನ್ನು ಪ್ರಾರಂಭಿಸುವುದು ಬೇಡ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಅವರು,  ತಕ್ಷಣ ಶಾಲೆ ಓಪನ್ ಮಾಡುವ ನಿರ್ಧಾರ ಕೈ ಬಿಡುವಂತೆ  ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಆಗ್ರಹಿಸಿದ್ದಾರೆ.  ಇನ್ನು ಎರಡ್ಮೂರು  ತಿಂಗಳ ನಂತರ ಪರಿಸ್ಥಿತಿಯನ್ನು ಅಧ್ಯಯನ ಮಾಡಿ ಶಾಲೆಗಳ ಪುನರಾರಂಭದ ಬಗ್ಗೆ ಯೋಚನೆ ಮಾಡುವುದು ಸೂಕ್ತ ಎಂದಿದ್ದಾರೆ.

ಪೋಷಕರು ಆತಂಕಕ್ಕೆ ಒಳಗಾಗಿದ್ದು, ಮುಖ್ಯಮಂತ್ರಿಗಳು ಗಮನಿಸಬೇಕು. ಬ್ರಿಟನ್, ಫ್ರಾನ್ಸ್, ಇಟಲಿ ಸೇರಿದಂತೆ ಬೇರೆ ದೇಶಗಳಲ್ಲಿ ಶಾಲೆಗಳನ್ನು ಪುನರಾರಂಭಿಸಿದ ನಂತರ ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು ತಗಲಿರುವುದು ವರದಿಯಾಗುತ್ತಿವೆ ಎಂದಿದ್ದಾರೆ.

 

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

ದಾವಣಗೆರೆ

Advertisement
Advertisement Enter ad code here

Title

To Top