ಡಿವಿಜಿ ಸುದ್ದಿ, ಬೆಂಗಳೂರು: ಆಗಸ್ಟ್ 15ರ ಬಳಿಕೆ ಶಾಲೆ, ಕಾಲೇಜ್ ತೆರೆಯಲಾಗುವುದು ಎಂದು ಕೇಂದ್ರ ಮಾನವ ಸಂಪನ್ಮೂಲ ಸಚಿವರು ಹೇಳಿದ ಹಿನ್ನೆಲೆ ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಕೇಂದ್ರದ ಕ್ರಮವನ್ನು ಸ್ವಾಗತಿಸಿದೆ.
ಶಾಲೆ ಆರಂಭಿಸುವ ವಿಷಯದಲ್ಲಿ ರಾಜ್ಯ ಸರ್ಕಾ ತೋರಿಸುತ್ತಿರುವ ಅವಸರಕ್ಕೆ ಕೇಂದ್ರ ಮಾನವಸಂಪನ್ಮೂಲ ಇಲಾಖೆ ಕಡಿವಾಣ ಹಾಕಿದೆ. ಆಗಸ್ಟ್ 15ಕ್ಕೆ ಮೊದಲು ಶಾಲೆಗಳ ಆರಂಭ ಸಾಧ್ಯವಿಲ್ಲ ಎಂದು ಸ್ಪಷ್ಟವಾಗಿ ಮಾನವಸಂಪನ್ಮೂಲ ಖಾತೆ ಸಚಿವ ರಮೇಶ ಪೋಖ್ರಿಯಾಲ್ ತಿಳಿಸಿದ್ದಾರೆ.
ಈಗ ಪರೀಕ್ಷೆ ನಡೆಯುತ್ತಿವೆ. ಅವುಗಳ ಫಲಿತಾಂಶ ಬರುವ ಹೊತ್ತಿಗೆ ಆಗಸ್ಟ್ ಬೇಕಾಗುತ್ತದೆ. ಸೆಪ್ಟಂಬರ್ ಮೊದಲ ವಾರಕ್ಕೆ ಹೋದರೂ ಆಶ್ಚರ್ಯವಿಲ್ಲ. ಶಾಲೆಗಳ ಆರಂಭಕ್ಕೆ ಯಾವುದೇ ಅವಸರವಿಲ್ಲ ಎಂದು ತಿಳಿಸಿದೆ.
ಕರ್ನಾಟಕದಲ್ಲಿ ಜುಲೈ 1ರಿಂದಲೇ ಶಾಲೆಗಳನ್ನು ಆರಂಭಿಸಲು ಶಿಕ್ಷಣ ಇಲಾಖೆ ಮುಂದಾಗಿತ್ತು. ಆದರೆ ಇದಕ್ಕೆ ಪಾಲಕರಿಂದ ತೀವ್ರ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಮತ್ತು ಮಕ್ಕಳ ಶಾಲೆಗಿಂತ ಅವರ ಆರೋಗ್ಯ ಮುಖ್ಯ ಎನ್ನುವ ಸಂದೇಶವನ್ನು ಪಾಲಕರು ಹೊರಹಾಕಿದ್ದರಿಂದ ಸದ್ಯಕ್ಕೆ ಕರ್ನಾಟಕದಲ್ಲಿ ಶಾಲೆಗಳ ಆರಂಭದ ಕುರಿತು ಸ್ಪಷ್ಟ ನಿರ್ಧಾರಕ್ಕೆ ಬರಲಾಗಿಲ್ಲ. ಶಿಕ್ಷಕರನ್ನು ಈಗಲೇ ಶಾಲೆಗೆ ಕರೆಸಿಕೊಳ್ಳುತ್ತಿರುವ ಶಿಕ್ಷಣ ಇಲಾಖೆ, ಅನಗತ್ಯವಾಗಿ ಸಮಸ್ಯೆಯನ್ನು ಮೈಮೇಲೆಳೆದುಕೊಳ್ಳುವಂತೆ ಕಾಣುತ್ತಿದೆ ಸಂಘ ಹೇಳಿದೆ.