ಡಿವಿಜಿ ಸುದ್ದಿ, ಶಿವಮೊಗ್ಗ: ಜಿಲ್ಲಾಧಿಕಾರಿ ಕೆ.ಬಿ. ಶಿವಕುಮಾರ್ ಹಾಗೂ ಉಸ್ತುವಾರಿ ಸಚಿವ ಕೆ.ಎಸ್. ಈಶ್ವರಪ್ಪ ಅವರು ಸ್ವಯಂ ಕ್ವಾರಂಟೈನ್ ಗೆ ಒಳಗಾಗಿದ್ದಾರೆ.
ಈಶ್ವರಪ್ಪ ಅವರ ಕೆಲಸಗಾರನಿಗೆ ಕೊರೊನಾ ಪಾಸಿಟಿವ್ ಪತ್ತೆಯಾಗಿದೆ. ಇದರಿಂದ ಸಚಿವರು ಸ್ವಯಂ ಕ್ವಾರಂಟೈನ್‌ಗೆ ಒಳಗಾಗಿದ್ದಾರೆ. ಈಶ್ವರಪ್ಪ ಅವರ ಜೊತೆ ಸಂಪರ್ಕದಲ್ಲಿದ್ದ ಜಿಲ್ಲಾಧಿಕಾರಿಗಳು ಮನೆಯಿಂದಲೇ ಕಾರ್ಯನಿರ್ವಹಿಸುತ್ತಿದ್ದಾರೆ.
ಮನೆ ಕೆಲಸಗಾರನಿಗೆ ಸೋಮವಾರ ಪಾಸಿಟಿವ್ ಬಂದಿತ್ತ. ಇದರಿಂದ ಈಶ್ವರಪ್ಪ, ಜಿಲ್ಲಾಧಿಕಾರಿ ಸೇರಿದಂತೆ 21 ಜನರ ಗಂಟಲು ದ್ರವ ಸಂಗ್ರಹಿಸಿ ಪರೀಕ್ಷೆಗೆ ಕಳುಹಿಸಲಾಗಿದ್ದು, ಎಲ್ಲರಿಗೂ ನೆಗೆಟಿವ್ ಬಂದಿದೆ.



